ಲಖನೌ: ಉಮೇಶ್ ಪಾಲ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯಾಗಿದ್ದ ಹಾಗೂ ಸಮಾಜವಾದಿ ಪಕ್ಷದ ರಾಜಕಾರಣಿ ಅತೀಕ್ ಅಹ್ಮದ್ ಪುತ್ರ ಅಸಾದ್ ಅಹ್ಮದ್ನನ್ನು ಉತ್ತರ ಪ್ರದೇಶ ಪೊಲೀಸರು ಎನ್ಕೌಂಟರ್ನಲ್ಲಿ ಹೊಡೆದುರುಳಿಸಿದ್ದು, ಸುದ್ದಿ ಕೇಳಿ ಬಂಧನದಲ್ಲಿರುವ ಗ್ಯಾಂಗ್ಸ್ಟರ್ ಅತೀಕ್ ಅಹ್ಮದ್ ಗಳಗಳನೇ ಅತ್ತು ಕುಸಿದು ಬಿದ್ದಿದ್ದಾನೆ.
ಈ ಘಟನೆಗೆ ನಾನೇ ಕಾರಣನಾಗಿದ್ದು, ಇದರ ಹೊಣೆಯನ್ನು ನಾನೇ ಹೊರುತ್ತೇನೆ ಎಂದು ಪೊಲೀಸರ ಬಳಿ ಹೇಳಿರುವುದಾಗಿ ಇಂಡಿಯಾ ಟುಡೇ ವರದಿ ಮಾಡಿದೆ.
ಅತೀಕ್ ಅಹ್ಮದ್ ಮಗನ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಅನುಮತಿ ನೀಡುವಂತೆ ಕೋರ್ಟ್ಗೆ ಮನವಿ ಮಾಡಿದ್ದಾನೆ ಎಂದು ವರದಿಯಾಗಿದೆ.
ಉತ್ತರಪ್ರದೇಶದ ಝಾನ್ಸಿಯಲ್ಲಿ ಅಸಾದ್ ಅಹ್ಮದ್ನನ್ನು ಎನ್ಕೌಂಟರ್ ಮಾಡಲಾಗಿದ್ದು, ಘಟನೆಯಲ್ಲಿ ಅಸಾದ್ ಸಹಚರ ಗುಲಾಂ ಮೊಹಮ್ಮದ್ನನ್ನು ಕೂಡ ಹತ್ಯೆ ಮಾಡಲಾಗಿದೆ.
ಉಮೇಶ್ ಪಾಲ್ ಹತ್ಯೆ ಪ್ರಕರಣದಲ್ಲಿ ಅಸಾದ್ ಮತ್ತು ಗುಲಾಂ ಪ್ರಮುಖ ಆರೋಪಿಗಳಾಗಿದ್ದರು. ಆರೋಪಿಗಳ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ ₹5 ಲಕ್ಷ ಬಹುಮಾನ ಘೋಷಿಸಲಾಗಿತ್ತು. ಆರೋಪಿಗಳನ್ನು ಯುಪಿ ಎಸ್ಟಿಎಫ್ ತಂಡ ಎನ್ಕೌಂಟರ್ ಮಾಡಿದೆ ಎಂದು ವಿಶೇಷ ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ತಿಳಿದ್ದಾರೆ.