ಬೆಂಗಳೂರು: ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ. ರಾಜ್ಯದಲ್ಲಿ ಭಾರತೀಯ ಜನತಾ ಪಾರ್ಟಿ ಕಟ್ಟಿ ಬೆಳೆಸಿದ್ದೇನೆ. ಬಿಜೆಪಿ ನನಗೆ ಎಲ್ಲಾ ಗೌರವ ಹಾಗೂ ಸ್ಥಾನಮಾನ ಕೊಟ್ಟಿದೆ. ಅದಕ್ಕೆ ಪ್ರತಿಯಾಗಿ ಬಿಜೆಪಿ ಕಟ್ಟಿ ಬೆಳೆಸುವ ಕೆಲಸ ಮಾಡಿದ್ದೇನೆ. ಪಕ್ಷ ಕೊಟ್ಟ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ನಿಭಾಯಿಸಿದ್ದೇನೆ. ಟಿಕೆಟ್ ಇಲ್ಲ ಎಂದಾಗ ನನಗೆ ಆಘಾತವಾಯಿತು. ಕಳೆದ 6 ತಿಂಗಳಿನಿಂದ ನನ್ನನ್ನು ಕಡೆಗಣಿಸಿದ್ದರು ಎಂದು ಕಾಂಗ್ರೆಸ್ ಸೇರ್ಪಡೆ ಬಳಿಕ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು. ಇನ್ನೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷವನ್ನು ಸೇರ್ತಾ ಇದ್ದೇನೆ. ದೇಶದಲ್ಲಿ ಮತ್ತು ರಾಜ್ಯದಲ್ಲಿ ಬಹಳ ಜನರಿಗೆ ಅಶ್ಚರ್ಯ ಆಗಿದೆ. ಯಾಕೆ ಕಾಂಗ್ರೆಸ್ ಸೇರ್ತಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ.
ಹಲವಾರು ತಿಂಗಳ ಹಿಂದೆ ಹಿರಿಯ ನಾಯಕನಾಗಿ ನನಗೆ ಏನು ವೇದನೆ ಆಗಿದೆ ಅದು ಯಾರ ಗಮನಕ್ಕೂ ಬರಲಿಲ್ಲ ಎಂದು ಹೇಳಿದ್ದಾರೆ. ನಾನು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ದಿವಂಗತ ಮಾನಿ ಸಂಸದ ಅನಂತ್ ಕುಮಾರ್ ಅವರ ಮಾರ್ಗದರ್ಶನದಲ್ಲಿ ಬಿಜೆಪಿ ಕಟ್ಟಿ ಬೆಳೆಸಿದ್ದೇನೆ. ಬಿಜೆಪಿ ಎಲ್ಲ ರೀತಿ ಗೌರವ ಸ್ಥಾನಮಾನ ನೀಡಿದೆ. ಅದಕ್ಕೆ ಪ್ರತಿಯಾಗಿ ನಾನೂ ಬಿಜೆಪಿ ಕಟ್ಟಿ ಬೆಳೆಸುವ ಕೆಲಸ ಮಾಡಿದ್ದೇನೆ. ಆದರೆ ಆರು ಬಾರಿ 1994 ರಿಂದ ಸ್ಪರ್ಧೆ ಮಾಡಿದ್ದೇನೆ. ಇದು ಏಳನೇ ಬಾರಿ ನಾನು ಸ್ಪರ್ಧೆ ಮಾಡಬೇಕಾಗಿದೆ. ಸಹಜವಾಗಿ ಟಿಕೇಟ್ ಇಲ್ಲ ಅಂದಾಗ ಆಘಾತ ಆಯ್ತು ವೇದನೆ ಆಯ್ತು. ಹಿರಿಯ ನಾಯಕನಾಗಿ ನನಗೆ ಗೌರವ ಕೊಡಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಕಾಂಗ್ರೆಸ್ ತತ್ವ, ಸಿದ್ಧಾಂತ ಒಪ್ಪಿ ಪಕ್ಷ ಸೇರ್ಪಡೆಯಾಗಿದ್ದೇನೆ. ರಾಜ್ಯ ಬಿಜೆಪಿ ಬೆಳವಣಿಗೆ ವರಿಷ್ಠರ ಗಮನಕ್ಕೆ ಬಂದಿಲ್ಲ ಅನ್ನಿಸುತ್ತೆ. ನಾನು ಮಂತ್ರಿ, ಮುಖ್ಯಮಂತ್ರಿ ಆಗಿದ್ದೇನೆ, ನನಗೆ ಅಧಿಕಾರ ಬೇಕಿಲ್ಲ. ರಾಜ್ಯ ಬಿಜೆಪಿ ಕೆಲವೇ ಕೆಲವು ವ್ಯಕ್ತಿಗಳ ಕಂಟ್ರೋಲ್ನಲ್ಲಿ ಇದೆ. ರಾಜ್ಯ ಬಿಜೆಪಿ ಕೆಲವು ವ್ಯಕ್ತಿಗಳ ಹಿಡಿತದಲ್ಲಿದೆ. ಕೆಲ ಬಿಜೆಪಿ ನಾಯಕರು ತಮ್ಮ ಹಿತಾಸಕ್ತಿಗಾಗಿ ಕೆಲಸ ಮಾಡ್ತಿದ್ದಾರೆ. ನಾನು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರಿಗೆ ಟೀಕೆ ಮಾಡುತ್ತಿಲ್ಲ. ಲಿಂಗಾಯತ ನಾಯಕರಲ್ಲಿ ಬಿಎಸ್ವೈ ಬಿಟ್ಟರೆ ನಾನೇ ಹಿರಿಯ. ಅದಕ್ಕಾಗಿ ನನ್ನನ್ನು ಪಕ್ಷದಿಂದ ಹೊರಹಾಕಿರಬೇಕು ಎಂದು ಈ ರೀತಿ ಮಾಡಿದರು ಎಂದು ಕೆಪಿಸಿಸಿ ಕಚೇರಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.