ಬೆಂಗಳೂರು: ನಾನು ದೇವೇಗೌಡರು ಕಾಂಗ್ರೆಸ್ನಿಂದ ಸಿಎಂ ಆಗಿಲ್ಲ ಎಂದು ಕುಮಾರಸ್ವಾಮಿ ಹೇಳಿದಾಗ ಕಾಂಗ್ರೆಸ್ ಬಗ್ಗೆ ಮಾತಾಡುವಾಗ ಎಚ್ಚರಿಕೆ ಇರಲಿ ಎಂದು ಕಾಂಗ್ರೆಸ್ ಶಾಸಕ ನರೇಂದ್ರ ಸ್ವಾಮಿ ಹೇಳಿದರು. ಈ ವೇಳೆ ಮಧ್ಯಪ್ರವೇಶಿಸಿದ ಮಾಜಿ ಬಸವರಾಜ ಬೊಮ್ಮಾಯಿ, ಕುಮಾರಸ್ವಾಮಿ ಅವರಿಗೆ ಮಾತಾಡಲು ಅವಕಾಶ ಕೊಡಿ ಎಂದರು.
ಹಾಗೆ ಗುತ್ತಿಗೆದಾರ ಆತ್ಮಹತ್ಯೆ ಮಾಡಿಕೊಂಡ ಎಂಬ ಕಾರಣಕ್ಕೆ ಈಶ್ವರಪ್ಪ ಅವರಿಂದ ಕಿತ್ತೋದ ಕಾಂಗ್ರೆಸ್ಸಿಗರು ರಾಜೀನಾಮೆ ಕೊಡಿಸಿದ್ದರು ಎಂದು ಆಕ್ರೋಶ ಹೊರಹಾಕಿದ ಕುಮಾರಸ್ವಾಮಿ, ನನ್ನ ಬಗ್ಗೆ ಮಾತನಾಡಲು ಕಾಂಗ್ರೆಸ್ಸಿಗರಿಗೆ ಯಾವ ನೈತಿಕತೆ ಇದೆ ಎಂದು ಖಾರವಾಗಿ ಪ್ರಶ್ನಿಸಿದರು.
ಸ್ಪೀಕರ್ ಒಪ್ಪಿದರೆ ಸದನದಲ್ಲೇ ಪೆನ್ಡ್ರೈವ್ ಪ್ರದರ್ಶನ ಮಾಡ್ತೇನೆ. ಇಲ್ಲೇ ಆಡಿಯೋ ಹಾಕಿಸುತ್ತೇನೆ ಎಂದು ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ರು. ಈ ವೇಳೆ ಹೆಚ್.ಡಿ.ಕುಮಾರಸ್ವಾಮಿ ಬಿಜೆಪಿ ಸದಸ್ಯರು ಬೆಂಬಲ ಸೂಚಿಸಿದ್ರು.