ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಫಾರಂ ಹೌಸ್ನಲ್ಲಿ ನಡೆದ ರೇವ್ ಪಾರ್ಟಿಯಲ್ಲಿ ಸಾಕಷ್ಟು ನಟ, ನಟಿಯರ ಹೆಸರು ಕೇಳಿ ಬಂದಿದೆ. ತೆಲುಗು ನಟಿ ಹೇಮಾ ಭಾಗಿಯಾಗಿದ್ದು ಈ ಬಗ್ಗೆ ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ ನಟಿ ಮಾತ್ರ ನಾನು ಇರಲೇ ಇಲ್ಲ ಎನ್ನುತ್ತಿದ್ದಾರೆ. ಇದೀಗ ರೇವ್ ಪಾರ್ಟಿ ಕುರಿತು ಮತ್ತೋರ್ವ ನಟಿ ವಿಡಿಯೋದಲ್ಲಿ ತಿಳಿಸಿದ್ದಾರೆ.
ತೆಲುಗಿನ ನಟಿ ಆಶಿ ರಾಯ್ ತಾನು ಪಾರ್ಟಿಯಲ್ಲಿ ಇದ್ದೆ ಎಂದು ವಿಡಿಯೊ ಮೂಲಕ ಹೇಳಿಕೊಂಡಿದ್ದಾರೆ. ಆಶಿ ರಾವ್ ರೇವ್ ಪಾರ್ಟಿಯಲ್ಲಿ ಇದ್ದರು ಎಂಬುದು ತಡವಾಗಿ ಬೆಳಕಿಗೆ ಬಂದಿದೆ. ಆಶಿ ರಾಯ್ ವಿಡಿಯೊದಲ್ಲಿ ಮಾತನಾಡಿ ʻʻಅದೊಂದು ಬರ್ತ್ಡೇ ಪಾರ್ಟಿಯಾಗಿತ್ತು. ಒಳಗೆ ಏನು ನಡೀತಿತ್ತು ಎಂದು ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ದಯವಿಟ್ಟು ನೀವೆಲ್ಲ ನನ್ನ ಬೆಂಬಲಿಸಿ. ನಾನು ಕಷ್ಟಪಟ್ಟು ಉದ್ಯಮದಲ್ಲಿ ಬೆಳೆಯುತ್ತಿರುವ ಹುಡುಗಿ. ದಯವಿಟ್ಟು ನನಗೆ ಸಹಾಯ ಮಾಡಿʼʼ ಎಂದಿದ್ದಾರೆ.
ಅಂದ ಹಾಗೆ ರೇವ್ ಪಾರ್ಟಿಯಲ್ಲಿ ಭಾಗಿಯಾಗಿದ್ದ ನಟಿ ಹೇಮಾ ರಾವ್ ಮುಜುಗರದಿಂದ ತಪ್ಪಿಸಿಕೊಳ್ಳಲು ಅಲ್ಲೇ ಇದ್ದ ಹೆಬ್ಬಗೋಡಿ ಫಾರ್ಮ್ ಹೌಸ್ ಒಳಗಡೆಯೇ ವಿಡಿಯೋ ಮಾಡಿ, ತಾನು ಹೈದರಾಬಾದ್ ಫಾರ್ಮ್ ಹೌಸ್ನಲ್ಲಿದ್ದೀನಿ ಎಂದು ಹೇಳಿದ್ದರು. ಆದರೆ ಪೊಲೀಸರು ಆಕೆಯ ತಪ್ಪು ಮಾಹಿತಿಯನ್ನು ಬಯಲು ಮಾಡಿದ್ದರು.