ಬೆಂಗಳೂರು: ಸ್ನೇಹಿತರಲ್ಲಿ ಇಂತಹ ಘಟನೆಗಳು ನಡೆಯುತ್ತೆ, ಅದೆಲ್ಲ ಅಲ್ಲಿಗೆ ಬಿಟ್ಟು ಹೋಗುತ್ತಿತ್ತು ಎಂದು ಹೇಳಿದ್ದು, ಅಂತಹ ಘಟನೆ ಕುರಿತು ಪ್ರಿನ್ಸಿಪಾಲ್ಗೆ ಬಿಡಬೇಕು. ಅದಕ್ಕೆ ಅವರನ್ನ ಸಸ್ಪೆಂಡ್ ಮಾಡೋದಾದರೇ ಅಥವಾ ಇನ್ನು ಹೆಚ್ಚಿನ ಕ್ರಮ ಬೇಕು ಅಂದರೆ ತೆಗೆದುಕೊಳ್ಳುತ್ತಾರೆ, ಅವರಿಗೆ ಬಿಟ್ಟಿದ್ದು.
ನಾವು ಇದಕ್ಕೆ ಮಧ್ಯಪ್ರವೇಶ ಮಾಡಬಾರದು ಎಂದರು. ಇನ್ನು ಘಟನೆ ಕುರಿತು ಈಗಾಗಲೇ ಪೊಲೀಸರು ಸೊಮೋಟೋ ದಾಖಲಿಸಿಕೊಂಡಿದ್ದಾರೆ. ತನಿಖೆ ಆಗುತ್ತೆ, ಸತ್ಯಾ ಸತ್ಯತೆ ಹೊರ ಬರುತ್ತೆ ಎಂದಿದ್ದಾರೆ. ಉಡುಪಿ ಕಾಲೇಜು ವಿದ್ಯಾರ್ಥಿನಿಯರ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು(ಜು.27) ಬಿಜೆಪಿ ಯುವ ಮೋರ್ಚಾ ಪ್ರತಿಭಟನೆ ನಡೆಸಲಿದ್ದಾರೆ.
ಈ ವೇಳೆ ಗೃಹ ಸಚಿವ ಜಿ.ಪರಮೇಶ್ವರ ಮನೆಗೆ ಮುತ್ತಿಗೆ ಹಾಕುವ ನಿರ್ಧಾರ ಹಿನ್ನಲೆ ಸಚಿವರ ಮನೆ ಸುತ್ತಮುತ್ತ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಅದರಂತೆ ಸದಾಶಿವನಗರ ನಿವಾಸದ ರಸ್ತೆಗೆ ಬ್ಯಾರಿಕೇಟ್ ಹಾಕಿರುವ ಪೊಲೀಸರು, ಒಂದು ಕೆಎಸ್ಆರ್ಪಿ ತುಕಡಿ ಕೂಡ ನಿಯೋಜನೆ ಮಾಡಲಾಗಿದೆ.
ಇದನ್ನೂ ಓದಿ : ಅರ್ಜಿ ಸಲ್ಲಿಸಿದವರಿಗೆ ನೂತನ ಬಿಪಿಎಲ್ ಕಾರ್ಡ್ ಶೀಘ್ರವೇ ವಿತರಣೆ – ಸಚಿವ ಕೆಎಚ್ ಮುನಿಯಪ್ಪ