ಚುನಾವಣೆಯಲ್ಲಿ ಸ್ಪರ್ಧಿಸುವ ಆಸಕ್ತಿ ಸಧ್ಯಕ್ಕೆ ನನ್ನ ತಮ್ಮನಿಗಿಲ್ಲ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ನನ್ನ ತಮ್ಮನಿಗೆ ಚುನಾವಣೆಯಲ್ಲಿ ಆಸಕ್ತಿ ಇಲ್ಲ. ಜನ ನಮಗೆ ವಿಶ್ರಾಂತಿ ನೀಡಲು ಹೇಳಿದ್ದಾರೆ. ಆದರೆ, ಪಕ್ಷದ ಕೆಲಸ ಮಾಡಬೇಕೆಂಬ ಆಸೆ ಇದೆ ಎಂದರು.
ನಮಗೆ 85 ಸಾವಿರ ಜನ ಮತ ಕೊಟ್ಟಿದ್ದಾರೆ. ಎಂದಿಗೂ ಆ ಜನರನ್ನು ಬಿಡಲಾಗದು. ದೇವರು ನಮಗೆ ಈಗ ಅಧಿಕಾರ ಕೊಟ್ಟಿದ್ದಾರೆ. 136 ಸೀಟ್ ಕೊಟ್ಟಿದ್ದಾರೆ, ಅದನ್ನು ಉಳಿಸಿಕೊಳ್ಳಬೇಕು. ಚನ್ನಪಟ್ಟಣ ಜನಕ್ಕೆ ಏನೂ ಆಗಿಲ್ಲ ಎಂಬ ಭಾವನೆ ಇದೆ. ನಾವು ಒಂದಷ್ಟು ಅಳಿಲು ಸೇವೆ ಮಾಡಬೇಕೆಂದು ಇದ್ದೇವೆ. ನಾವು ಅಧಿಕಾರ ಇದ್ದಾಗ ಮಾಡಿದ್ದೇವೆ. ಇದೀಗ ಸರಿಯಾದ ಸಮಯ. ಏನೋ ಒಂದು ಸಹಾಯ ಮಾಡಬೇಕೆಂದು ಇದ್ದೇವೆ ಎಂದು ಡಿಕೆ ಶಿವಕುಮಾರ್ ಹೇಳಿದರು.
ಹೆಚ್ಡಿ ಕುಮಾರಸ್ವಾಮಿ ಚನ್ನಪಟ್ಟಣ ನೋಡುವ ಮೊದಲು ನಾನು ನೋಡಿದ್ದೇನೆ. ಕುಮಾರಸ್ವಾಮಿ ಬಹಳ ಲೇಟಾಗಿ ರಾಜಕಾರಣಕ್ಕೆ ಬಂದವರು. ನಾನು 1985ರಲ್ಲೇ ವಿಧಾನಸಭಾ ಚುನಾವಣೆಗೆ ನಿಂತೆ. ಅವರು 1995 ರ ನಂತರ ರಾಜಕಾರಣಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ಗೊತ್ತು ಎಂದು ಅವರು ಹೇಳಿದರು. ಹೆಚ್ಚಿನ ಡಿಸಿಎಂ ಸ್ಥಾನಗಳಿಗೆ ಬೇಡಿಕೆ ಸೃಷ್ಟಿಯಾಗಿರುವ ಬಗ್ಗೆ ಪ್ರತಿಕ್ರಿಯಿಸಿ, ನೀವು ಪ್ರತಿ ದಿನ ಸುದ್ದಿ ಪ್ರಕಟ ಮಾಡುತ್ತಿದ್ದೀರಲ್ಲ, ಇದರಿಂದ ಖುಷಿಯಾಗುವವರಿಗೆ ಆಗಲಿ. ಯಾರು ಏನು ಬೇಕಿದ್ದರೂ ಬೇಡಿಕೆ ಇಡಲಿ. ಪಕ್ಷ ಯಾರಿಗೆ ಏನು ಉತ್ತರ ಕೊಡಬೇಕೋ ಕೊಡುತ್ತದೆ