ಕುಮಾರಸ್ವಾಮಿ ಅವರು ಚನ್ನಪಟ್ಟಣ ನೋಡುವುದಕ್ಕೂ ಮೊದಲೇ ನಾನು ನೋಡಿದ್ದೇನೆ. ಅವರು ತಡವಾಗಿ ರಾಜಕೀಯಕ್ಕೆ ಬಂದವರು. ಅವರಿಗಿಂತ 10 ವರ್ಷ ಮೊದಲೇ ನನಗೆ ಚನ್ನಪಟ್ಟಣ ಗೊತ್ತು. ನಾನು ಅದೇ ಜಿಲ್ಲೆಯವನು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣಕ್ಕೆ ನೀವು ಏನೂ ಮಾಡಿಲ್ಲ ಎನ್ನುವ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಕೇಳಿದಾಗ ಚನ್ನಪಟ್ಟಣಕ್ಕೆ ನಾನು ಏನು ಮಾಡಿದ್ದೇನೆ, ಏನು ಮಾಡಿಲ್ಲ ಎಂದು ಹೆಚ್ಡಿ ಕುಮಾರಸ್ವಾಮಿಯವರಿಗೇನು ಗೊತ್ತು?
ನಾನು 1985ರಲ್ಲೇ ಚುನಾವಣೆಗೆ ನಿಂತವನು.ಕುಮಾರಸ್ವಾಮಿ ಅವರು 1995ರ ಬಳಿಕ ಲೋಕಸಭಾ ಚುನಾವಣೆಗೆ ನಿಂತವರು. ದೊಡ್ಡವರು ಅಧಿಕಾರ ಅನುಭವಿಸಿದರೂ ಚನ್ನಪಟ್ಟಣದಲ್ಲಿ ಏನೂ ಅಭಿವೃದ್ಧಿ ಆಗಿಲ್ಲ ಎಂಬ ಭಾವನೆ ಅಲ್ಲಿನ ಜನರಲ್ಲಿದೆ. ಅಲ್ಲಿನ ಜನರಿಗೆ ಅಳಿಲು ಸೇವೆ ಮಾಡೋಣ. ಹಿಂದೆ ಮಂತ್ರಿಯಾಗಿದ್ದಾಗ ಸೇವೆ ಮಾಡಿದ್ದೇನೆ. ಈಗ ಉತ್ತಮ ಸಮಯ ಒದಗಿ ಬಂದಿದೆ. ಸಣ್ಣ ಸಹಾಯ ಮಾಡೋಣ ಎಂದು ಕಾರ್ಯಪ್ರವೃತ್ತನಾಗಿದ್ದೇನೆ ಎಂದು ಹೇಳಿದರು.