ಬೆಂಗಳೂರು ;– ನಾನು ಇಸ್ರೋ ವಿಜ್ಞಾನಿಗಳನ್ನು ಭೇಟಿ ಆಗಲು ಬೆಂಗಳೂರಿಗೆ ಬಂದಾಗ ಸ್ವಾಗತಕ್ಕೆ ಬರಬೇಡಿ ಎಂದು ಕಾಂಗ್ರೆಸ್ ನಾಯಕರಿಗೆ ನಾನೇ ಹೇಳಿದ್ದೇ ಎಂದು PM ಮೋದಿ ಹೇಳಿದ್ದಾರೆ.
ಶನಿವಾರ ಬೆಳ್ಳಂಬೆಳಗ್ಗೆ ನನ್ನನ್ನು ಸ್ವಾಗತಿಸಲು ವಿಮಾನ ನಿಲ್ದಾಣಕ್ಕೆ ಬರುವ ಕಷ್ಟತೆಗೆದುಕೊಳ್ಳಬೇಡಿ. ನಾನು ಬಂದು ಇಸ್ರೋ ವಿಜ್ಞಾನಿಗಳನ್ನು ಭೇಟಿ ಮಾಡಿ ಹೊರಟು ಹೋಗುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಜ್ಯಪಾಲ ಥಾವರ್ಚಂದ್ ಗೆಹಲೋತ್ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದ್ದೆ. ಅದರಂತೆ ಅವರು ಸಹಕಾರ ನೀಡಿದ್ದು, ಅವರೆಲ್ಲರಿಗೂ ಆಭಾರಿ ಆಗಿದ್ದೇನೆ’ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ತನ್ಮೂಲಕ ಪ್ರಧಾನಿ ಅಧಿಕೃತ ರಾಜ್ಯ ಭೇಟಿ ವೇಳೆ ಶಿಷ್ಟಾಚಾರ ಪಾಲನೆ ಬಗ್ಗೆ ಸ್ವತಃ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೇ ಸ್ಪಷ್ಟೀಕರಣ ನೀಡಿದ್ದಾರೆ. ಅಲ್ಲದೆ, ಮುಂದಿನ ಬಾರಿ ತಾವು ಅಧಿಕೃತ ಕಾರ್ಯಕ್ರಮಗಳಿಗೆ ಬಂದಾಗ ಶಿಷ್ಟಾಚಾರ ಪಾಲಿಸಬಹುದು ಎಂದೂ ಹೇಳಿದ್ದಾರೆ.