ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ (Karnataka Assembly Elections 2023 Result) ಮೇ.13 ರಂದು ಬಂದಿದ್ದು, ಅದರಂತೆ ಸಿದ್ದರಾಮಯ್ಯ(Siddaramaiah) 2 ನೇ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇನ್ನು ಉಪ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್(Dk Shivakumar) ಎಂದು ಘೋಷಿಸಲಾಗಿದೆ.
ಈ ಕುರಿತು ಬೆಂಗಳೂರಿನಲ್ಲಿ ಮಾತನಾಡಿರುವ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್(G Parameshwara) ‘ನನಗೆ ಡಿಸಿಎಂ ಸ್ಥಾನ ಕೊಡಲೇಬೇಕು, ನಾನು ಈ ಹಿಂದೆ ಕೂಡ ಉಪ ಮುಖ್ಯಮಂತ್ರಿಯಾಗಿದ್ದೆ. ಎಲ್ಲ ಸಮುದಾಯಗಳನ್ನು ಪರಿಗಣಿಸಿ ಡಿಸಿಎಂ ಸ್ಥಾನ ಕೊಡಬೇಕಾಗುತ್ತದೆ. ಒಬ್ಬರು ಮಾತ್ರ ಅಧಿಕಾರದಲ್ಲಿ ಇರಬೇಕೆಂಬುದು ಸೂಕ್ತವಲ್ಲ, ಎಲ್ಲರ ನಾಯಕತ್ವದಿಂದ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಿದೆ ಎಂದರು.