ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (Karnataka CM Race) ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ದಿಲ್ಲಿಗೆ ಹೊರಡುವ ವೇಳೆ ಮಾಧ್ಯಮಗಳ ಜತೆ ಮಾತನಾಡಿದ ಡಿಕೆ.ಶಿವಕುಮಾರ್(DK. Sivakumar) ಭಾವುಕರಾದರು. ʻನಮ್ಮದು ಅವಿಭಕ್ತ ಮನೆ. ನಮ್ಮ ಮನೆಯ ಸದಸ್ಯರ ಸಂಖ್ಯೆ 135. ನಾನು ಈ ಮನೆಯನ್ನು ಒಡೆಯಲ್ಲ. ಅವರು ನನ್ನನ್ನು ಇಷ್ಟಪಡುತ್ತಾರೋ ಬಿಡುತ್ತಾರೋ, ನಾನೊಬ್ಬ ಜವಾಬ್ದಾರಿಯುತ ಮನುಷ್ಯ. ನಾನು ಬೆನ್ನಿಗೆ ಚೂರಿ ಹಾಕಲ್ಲ, ಬ್ಲ್ಯಾಕ್ಮೇಲ್ ಮಾಡಲ್ಲ.
ಪಕ್ಷ ಹೇಳಿದಂತೆ ಕೇಳುತ್ತೇನೆʼʼ ಎಂದು ಹೇಳಿದರು. ʻʻಕಾಂಗ್ರೆಸ್ ಪಕ್ಷ, ನನ್ನ ಪಾಲಿನ ದೇವರು. ಕಾಂಗ್ರೆಸ್ ಪಕ್ಷ ನನ್ನ ಪಾಲಿನ ದೇವಾಲಯ. ಕಾಂಗ್ರೆಸ್ ಪಕ್ಷ, ನನಗೆ ತಾಯಿ ಇದ್ದಂತೆ. ದೇವರು ಮತ್ತು ತಾಯಿಗೆ, ಮಕ್ಕಳಿಗೆ ಏನು ನೀಡಬೇಕು ಎಂಬುದು ಗೊತ್ತಿರುತ್ತದೆʼʼ ಎಂದು ಹೇಳಿದರು. ʻʻನಾನು ನನ್ನ ದೇವರನ್ನು ಭೇಟಿ ಮಾಡಲು ದೇವಾಲಯಕ್ಕೆ ಹೋಗುತ್ತಿದ್ದೇನೆ. ನಾನು ಒಬ್ಬನೇ ಹೋಗುತ್ತಿದ್ದೇನೆ.. ಪ್ರಧಾನ ಕಾರ್ಯದರ್ಶಿ ಒಬ್ಬನೇ ಬರುವಂತೆ ಹೇಳಿದ್ದಾರೆ. ಹೀಗಾಗಿ ಒಬ್ಬನೇ ಹೋಗುತ್ತಿದ್ದೇನೆ. ಯಾರನ್ನೂ ಜತೆಗೆ ಕರೆದೊಯ್ಯುತ್ತಿಲ್ಲʼʼ ಎಂದು ಕೂಡಾ ಡಿ.ಕೆ. ಶಿವಕುಮಾರ್ ಹೇಳಿದರು.