ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಅವಕಾಶ ನೀಡಿ-ಶ್ರೀರಾಮ ಸೇನೆ ಆಗ್ರಹ

ಜಿಲ್ಲೆ

ಹುಬ್ಬಳ್ಳಿ : ನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಅವಕಾಶ ಕೊಡಲು ಶ್ರೀರಾಮ ಸೇನಾ ಮುಖಂಡರು ಆಗ್ರಹಿಸಿದರು.
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಎದುರು ಆಕ್ರೋಶ ವ್ಯಕ್ತಪಡಿಸಿ, ಯಾವುದೇ ಕಾರಣಕ್ಕೋ ಈ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅವಕಾಶ ಕೊಡದಿದ್ದರೆ ಉಗ್ರ ಹೋರಾಟ ಮಾಡಲಾಗುವುದು ಎಂದು ಶ್ರೀರಾಮ ಸೇನಾ ಮುಖಂಡ ಅಣ್ಣಪ್ಪ ದಿವಟಗಿ ಆಗ್ರಹಿಸಿದರು.
ಕೇಲ ವರ್ಷಗಳಿಂದ ತಣ್ಣಗಾಗಿದ್ದ ಹುಬ್ಬಳ್ಳಿ ಈದ್ಗಾ ಮೈದಾನ ಈಗ ಮತ್ತೇ ಸಾಕಷ್ಟು ಚರ್ಚೆಗೆ ಈಡು ಮಾಡಿಕೊಡುತಿದೆ. ಒಂದು ಕಾಲದಲ್ಲಿ ಹುಬ್ಬಳ್ಳಿಯನ್ನು ಹೊತ್ತಿ ಉರಿಯುವಂತೆ ಮಾಡಿದ್ದ ಈ ವಿವಾದ ಈಗ ರಾಜಕೀಯ ವಲಯದಲ್ಲಿ ಸಾಕಷ್ಟು ಮಿಂಚಿನ ಸಂಚಲನ ಸಹ ಮೂಡಿಸಿದೆ. ಈದ್ಗಾ ಮೈದಾನದಕ್ಕಾಗಿ 90ರ ದಶಕದಲ್ಲಿ ನಡೆದ ಹೋರಾಟದಿಂದ ಸಾಕಷ್ಟು ಸಾವು ನೋವು ಆದವು. ಈಗ ಮತ್ತೆ ಹುಬ್ಬಳ್ಳಿಯ ಈದ್ಗಾ ಮೈದಾನದ ಹೋರಾಟ ಅಷ್ಟೊಂದು ರಣ ರೋಚಕ ಇತಿಹಾಸ ಪಡೆಯುವ ಸಾಧ್ಯತೆ ಇದೆ. ಈದ್ಗಾ ಮೈದಾನದಲ್ಲಿ ಗಣೇಶ ಚತುರ್ಥಿ ವೇಳೆ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡುವಂತೆ ಆಗ್ರಹಿಸಿ ಈಗಾಗಲೇ ರಾಣಿ ಚೆನ್ನಮ್ಮ ಈದ್ಗಾ ಮೈದಾನ ಗಜಾನನ ಉತ್ಸವ ಸಮಿತಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದ ಬೆನ್ನಲ್ಲೆ ಶ್ರೀರಾಮ ಸೇನೆ ಸಹ ಹೋರಾಟಕ್ಕೆ ಸಜ್ಜಾಗಿದೆ‌.
ಇದು ಹೊಸದೊಂದು ವಿವಾದ ಹುಟ್ಟುಹಾಕುವ ಸಾಧ್ಯತೆ ದಟ್ಟವಾಗಿದ್ದು ಇಂದು ಸಹ ಶ್ರೀರಾಮ ಸೇನಾ ಮುಖಂಡರು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತರಿಗೆ ಹಾಗೂ ಮೇಯರ್ ಹಾಗೂ ಉಪಮೇಯರ್ ಅವರಿಗೆ ಎಚ್ಚರಿಕೆ ನೀಡಿದರು.
ಇದು ಸಾಕಷ್ಟು ಪರ ವಿರೋಧ ಚರ್ಚೆಗಳಿಗೆ ಕಾಣರವಾಗುತಿದ್ದು ಮುಂದಿನ ದಿನಗಳಲ್ಲಿ ಶ್ರೀರಾಮ ಸೇನಾ ಮುಖಂಡ ಪ್ರಮೋದ್ ಮುತಾಲಿಕ್ ಅವರು ಹೋರಾಟಕ್ಕೆ ಇಳಿಯಲಿದ್ದಾರೆ.

Leave a Reply

Your email address will not be published. Required fields are marked *