ಐಇಡಿ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾದ ಘಟನೆ ಛತ್ತೀಸ್ಗಢದ ಬಿಜಾಪುರದಲ್ಲಿ ಜರುಗಿದೆ. ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ.
ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯ ಮಂಡಿಮಾರ್ಕಾ ಅರಣ್ಯದಲ್ಲಿ ಕಳೆದ ರಾತ್ರಿ ಐಇಡಿ ಸ್ಫೋಟ ಸಂಭವಿಸಿದೆ.
ಭದ್ರತಾ ಪಡೆ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಪೈಪ್ ಬಾಂಬ್ ಸ್ಫೋಟಗೊಂಡಿದೆ. ಪುರುಷೋತ್ತಮ್ ನಾಗ್, ಕೋಮಲ್ ಯಾದವ್, ಸಿಯಾರಾಮ್ ಸೋರಿ ಮತ್ತು ಸಂಜಯ್ ಕುಮಾರ್ ಗಾಯಗೊಂಡಿದ್ದು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಭದ್ರತಾ ಪಡೆಗಳನ್ನು ರವಾನಿಸಲಾಗಿದ್ದು, ಗಾಯಗೊಂಡ ಎಸ್ಟಿಎಫ್ ಯೋಧರಿಗೆ ಸೂಕ್ತ ಚಿಕಿತ್ಸೆ ನೀಡಲು ಅಗತ್ಯ ವ್ಯವಸ್ಥೆ ಮಾಡಲಾಗಿದೆ. ಕಳೆದ ತಿಂಗಳ ಆರಂಭದಲ್ಲಿ, ಇದೇ ರೀತಿಯ ಘಟನೆಯಲ್ಲಿ, ಸುಕ್ಮಾ ಜಿಲ್ಲೆಯಲ್ಲಿ ಐಇಡಿ ಸ್ಫೋಟದಲ್ಲಿ ಇಬ್ಬರು ಸಿಆರ್ಪಿಎಫ್ ಸಿಬ್ಬಂದಿ ಮೃತಪಟ್ಟಿದ್ದರು