ಬೆಂಗಳೂರು : ಬರ, ಪ್ರವಾಹ ಇದ್ದಾಗ ಜನರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಬೇಕು. ಇಲ್ಲದಿದ್ದರೆ ರೈತರ ಪಾಲಿಗೆ ಸರ್ಕಾರ ಸತ್ತಂತೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕುಟುಕಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ಧರಣಿ ಮಾಡಿದ್ದೇವೆ, ಈಗ ರಾಜ್ಯಪಾಲರಿಗೂ ದೂರು ಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ.
18 ಸಾವಿರ ಕೋಟಿ ನಷ್ಟ ಆಗಿದೆ ಎಂದು ಕೇಂದ್ರ ಸರ್ಕಾರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿತ್ತು. ಆದರೆ, ರಾಜ್ಯ ಸರ್ಕಾರ ಕೇವಲ 105 ಕೋಟಿ ರೂ. ಬಿಡುಗಡೆ ಮಾಡಿದೆ. ಬೆಳಗಾವಿ ಅಧಿವೇಶನದಲ್ಲಿ ತಕ್ಷಣ ಪರಿಹಾರ ಕೊಡೋದಾಗಿ ಹೇಳಿದ್ದರು. ಆದರೆ, ಇನ್ನೂ ಕುಂಟು ನೆಪ ಹೇಳುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ
ಗ್ಯಾರಂಟಿ ಯೋಜನೆಗಳಿಗೆ ಪೂರ್ತಿ ಹಣ ಬಿಡುಗಡೆ ಮಾಡಿಲ್ಲ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳು ಕೂಡ ವಿಫಲವಾಗಿವೆ. ರಾಜ್ಯ ಸರ್ಕಾರಕ್ಕೆ ರೈತರ ಬಗ್ಗೆ ಚಿಂತೆಯಿಲ್ಲ. ರೈತರು ಸತ್ತರೂ ಇವರಿಗೆ ಚಿಂತೆ ಇಲ್ಲ. ರೈತರ ಬಗ್ಗೆ ಕಾಳಜಿ ಇಲ್ಲದ ಸರ್ಕಾರ ಬಹಳ ದಿನ ಇರಲ್ಲ ಎಂದು ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.