ಬೆಂಗಳೂರು: ದೇಶದಲ್ಲಿ ಮೋದಿಗೆ ರಕ್ಷಣೆ ಇಲ್ಲ ಎಂದಾದರೆ ಸಾಮಾನ್ಯ ಜನರ ಕಥೆಯೇನು? ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿದ್ಧು, ಮರ್ ಜಾ ಮೋದಿ ಎಂದು ಯಾರು? ಎಲ್ಲಿ?
ಕೂಗಿದ್ದರು ಎನ್ನುವುದನ್ನು ಮೋದಿಯವರು ಬಹಿರಂಗ ಪಡಿಸಬೇಕು. ಇಂಟಲಿಜೆನ್ಸ್, ಪೊಲೀಸ್, ತನಿಖಾ ಸಂಸ್ಥೆಗಳು ಎಲ್ಲವೂ ಕೈಯಲ್ಲಿರುವಾಗ ಸಾಯಲು ಹೇಳಿದವರನ್ನು ಎಳೆದು ತಂದು ಜೈಲಿಗೆ ಹಾಕಲು ಏನು ಅಡ್ಡಿ ಇದೆ? ಎಂದು ಪ್ರಶ್ನಿಸಿದ್ದಾರೆ.
ಈ ದೇಶದಲ್ಲಿ ಒಬ್ಬ ಪ್ರಧಾನಿಗೆ ರಕ್ಷಣೆ ಇಲ್ಲ ಎಂದಾದರೆ ಇನ್ನು ಸಾಮಾನ್ಯ ಜನರಿಗೆ ಹೇಗೆ ರಕ್ಷಣೆ ನೀಡುತ್ತಾರೆ? ಇನ್ನು ಯಾಕೆ ಮರ್ ಜಾ ಮೋದಿ ಎಂದು ಕೂಗಿದರವರ ಮೇಲೆ ಕ್ರಮ ತೆಗೆದುಕೊಂಡಿಲ್ಲ? ಇವೆಲ್ಲ ಅನುಕಂಪ ಗಳಿಸಲು ಮಾಡುತ್ತಿರುವ ಗಿಮಿಕ್ ಗಳಷ್ಟೆ. ಜನರು ಮೂರ್ಖರಲ್ಲ, ಅವರಿಗೆ ಈ ನಾಟಕ ಅರ್ಥವಾಗುತ್ತದೆ ಎಂದರು. ನರೇಂದ್ರ ಮೋದಿಯವರಿಂದ ಹಿಡಿದು ರಾಜ್ಯದ ಬಿಜೆಪಿ ನಾಯಕರವರೆಗೆ ಈಗ ಎಲ್ಲರೂ ಬಿ.ಎಸ್ ಯಡಿಯೂರಪ್ಪನವರನ್ನು ಹಾಡಿ ಹೊಗಳುತ್ತಿರುವುದು ಅವರ ಮೇಲಿನ ಪ್ರೀತಿಯಿಂದ ಖಂಡಿತ ಅಲ್ಲ. ಲಿಂಗಾಯತರ ಮತ ಗಳಿಸಲು ಮಾತ್ರ. ಇದನ್ನು ಅರ್ಥಮಾಡಿಕೊಳ್ಳುವ ಶಕ್ತಿ ಸಾಮರ್ಥ್ಯ ಲಿಂಗಾಯತ ಸಮುದಾಯಕ್ಕಿದೆ ಎಂದು ಬರೆದುಕೊಂಡಿದ್ದಾರೆ.