ದಾವಣಗೆರೆ: ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಸೂಪರ್ ಸಿಎಂ ರೀತಿ ವರ್ತಿಸುತ್ತಿದ್ದಾರೆ. ಅವರು, ತಂದೆ ಎಐಸಿಸಿ ಅಧ್ಯಕ್ಷರಾಗಿದ್ದಾರೆಂದು ಈ ರೀತಿ ಮಾಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಎಂಪಿ ರೇಣುಕಾಚಾರ್ಯ (MP Renukachary) ವಾಗ್ದಾಳಿ ನಡೆಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಗ್ಯಾರಂಟಿ ಜಾರಿಗೊಳಿಸುವಂತೆ ಅಭಿಯಾನ ಆರಂಭಿಸಿದ್ದೇನೆ. ಜೂನ್ 1ರಿಂದ ಯಾರೂ 200 ಯೂನಿಟ್ ವರೆಗಿನ ವಿದ್ಯುತ್ ಬಿಲ್ ಕಟ್ಟಬೇಡಿ.
ಒಂದು ವೇಳೆ ಏನಾದರೂ ಹಣ ಕೇಳಿದರೆ ನನಗೆ ಫೋನ್ ಮಾಡಿ ಎಂದು ಹೇಳಿದ್ದಾರೆ. ಜತೆಗೆ, ಮನೆ ಮನೆಗೆ ತೆರಳಿ ಗ್ಯಾರಂಟಿ ಅಭಿಯಾನ ನಡೆಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅಪಾರವಾದ ಗೌರವ ಇದೆ. ಆದರೆ ಸಿಎಂ, ಡಿಸಿಎಂ ಗ್ಯಾರಂಟಿ ಕಾರ್ಡ್ ಮೇಲೆ ಸಹಿಮಾಡಿದ್ದಾರೆ. ಅದ್ದರಿಂದ ಯಾವುದೇ ಕಂಡೀಷನ್ ಇಲ್ಲದೆ ಯೋಜನೆ ಜಾರಿಗೊಳಿಸಬೇಕು. ಜೂನ್ 1ರೊಳಗೆ ಜಾರಿಗೊಳಿಸದಿದ್ದರೆ ಮತ್ತೆ ಅಭಿಯಾನ ಆರಂಭಿಸುತ್ತೇವೆ ಎಂದು ಅವರು ಆಗ್ರಹಿಸಿದ್ದಾರೆ.