ಹೈದರಾಬಾದ್ :- PM ಮೋದಿಗೆ ನನ್ನ ಹೆಸರು ಕೇಳಿದರೆ ನಡುಕ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಪ್ರಧಾನಿ ನರೇಂದ್ರ ಮೋದಿಗೆ ನನ್ನ ಕಂಡರೆ ಭಯ. ನನ್ನ ಹೆಸರು ಕೇಳಿದರೆ ಅವರಿಗೆ ನಡುಕ ಹುಟ್ಟುತ್ತದೆ. ಹೀಗಾಗಿ ಎಲ್ಲೆಡೆ ನನ್ನ ವಿರುದ್ಧ ಮಾತನಾಡುತ್ತಾರೆ’ ಎಂದರು.
ಅವರು ಕರ್ನಾಟಕ ವಿಧಾನಸಭಾ ಚುನಾವಣೆ ವೇಳೆ 48 ಬಾರಿ ಭೇಟಿ ನೀಡಿ ಪ್ರಚಾರ ಮಾಡಿದ್ದರು. ಆದರೆ ಅವರು ಪ್ರಚಾರ ಮಾಡಿದಲ್ಲೆಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದಾರೆ. ಇದು ತೆಲಂಗಾಣದಲ್ಲೂ ಪುನರಾವರ್ತನೆಯಾಗಲಿದೆ. ಮೋದಿ 100 ಬಾರಿ ತೆಲಂಗಾಣಕ್ಕೆ ಭೇಟಿ ನೀಡಿದರೂ ಬಿಜೆಪಿ ಇಲ್ಲಿ ಅಧಿಕಾರಕ್ಕೆ ಬರಲಾಗದು.
ಈ ಬಾರಿ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ’ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ತೆಲಂಗಾಣದಲ್ಲಿ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತು ಬಿಆರ್ಸಿ ಎರಡೂ ಒಂದೇ. ಬಿಆರ್ಸಿ ತೆಲಂಗಾಣದಲ್ಲಿ ಬಿಜೆಪಿಯ ಬಿ ಟೀಮ್ ಆಗಿ ಕೆಲಸ ಮಾಡುತ್ತಿದೆ. ತೆಲಂಗಾಣದ ಜನತೆ ಕೆಸಿಆರ್ ಮತ್ತು ಮೋದಿಯವರ ಮಕ್ಮಲ್ ಟೋಪಿಗೆ ಈ ಬಾರಿ ತಲೆ ಕೊಡುವುದಿಲ್ಲ ಎಂದರು. ವಿಶೇಷ ಎಂದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಇಡೀ ಭಾಷಣವನ್ನು ಕನ್ನಡದಲ್ಲೇ ಮಾಡಿದರು. ಅದನ್ನು ರಾಜ್ಯದ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ತೆಲುಗು ಭಾಷೆಗೆ ಅನುವಾದ ಮಾಡಿದರು.
ಕರ್ನಾಟಕ ವಿಧಾನಸಭಾ ಚುನಾವಣೆಯ ವೇಳೆ ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ತನ್ನ 5 ಭರವಸೆ ಈಡೇರಿಸಲು ಸಾಧ್ಯವಿಲ್ಲ. ಭರವಸೆ ಈಡೇರಿಸಿದರೆ ರಾಜ್ಯ ಆರ್ಥಿಕವಾಗಿ ದಿವಾಳಿಯಾಗುತ್ತದೆ ಎಂದು ಟೀಕಿಸಿದ್ದರು. ಆದರೆ ಅವರ ವಾದ ತಪ್ಪು ಎಂಬುದನ್ನು ನಾವು ಸಾಧಿಸಿ ತೋರಿಸಿದ್ದೇವೆ. ಅಧಿಕಾರಕ್ಕೆ ಬರುತ್ತಲೇ ನಾವು ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳನ್ನು ಜಾರಿಗೆ ತಂದಿದ್ದೇವೆ. ಹೀಗಾಗಿಯೇ ಮೋದಿಗೆ ನನ್ನ ಹೆಸರು ಕೇಳಿದಾಕ್ಷಣ ನಡುಕ ಉಂಟಾಗುತ್ತದೆ. ಇದೇ ಕಾರಣಕ್ಕೆ ಇತ್ತೀಚಿನ ಮಧ್ಯಪ್ರದೇಶ ಚುನಾವಣಾ ಪ್ರಚಾರದ ವೇಳೆಯೂ ನನ್ನ ಹೆಸರು ಪ್ರಸ್ತಾಪಿಸಿದ್ದರು’ ಎಂದು ವ್ಯಂಗ್ಯವಾಡಿದರು.