ಕರಿಬೇವು ಎಲೆಗಳು ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳಂತಹ ಅಗತ್ಯ ಪೋಷಕಾಂಶಗಳನ್ನು ಹೊಂದಿವೆ. ಮೂಳೆ, ಹಲ್ಲುಗಳು ಮತ್ತು ಸ್ನಾಯುಗಳ ಬೆಳವಣಿಗೆಗೆ ಈ ಎಲ್ಲಾ ವಸ್ತುಗಳು ಬಹಳ ಮುಖ್ಯ.ಕರಿಬೇವಿನ ವೈಜ್ಞಾನಿಕ ಹೆಸರು ಮುರ್ರಾಯ ಕೊಯೆನಿಗಿ.ಕರಿಬೇವಿನ ಎಲೆಗಳನ್ನು ಒಗ್ಗರಣೆ ಮಾತ್ರವಲ್ಲದೆ, ಚಟ್ನಿ, ಬಗೆ ಬಗೆಯ ತಿಂಡಿ ಮತ್ತು ಸಿಹಿತಿಂಡಿಗಳು ಸೇರಿದಂತೆ ವಿವಿಧ ಭಕ್ಷ್ಯಗಳಲ್ಲಿ ಬಳಸಲಾಗುತ್ತದೆ.
ಕರಿಬೇವಿನ ಎಲೆಗಳು ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿವೆ. ನಿತ್ಯ ಕರಿಬೇವಿನ ಸೊಪ್ಪನ್ನು ತಿನ್ನುವುದರಿಂದ ಆರೋಗ್ಯಕ್ಕೆ ಅನೇಕ ರೀತಿಯ ಪ್ರಯೋಜನಗಳಾಗುವುದು.
ತೂಕ ನಿಯಂತ್ರಣದಲ್ಲಿ ಸಹಕಾರಿ:
ಕರಿಬೇವಿನ ಎಲೆಗಳು ಸಾಕಷ್ಟು ಪ್ರಮಾಣದ ಫೈಬರ್ ಅನ್ನು ಹೊಂದಿರುತ್ತವೆ. ಇದು ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.ಈ ಎಲೆಯು ನಮ್ಮ ಜೀರ್ಣಕ್ರಿಯೆಯನ್ನು ಉತ್ತಮವಾಗಿಡುವುದರ ಜೊತೆಗೆ ಮಲಬದ್ಧತೆ ಸಮಸ್ಯೆಯನ್ನು ನಿಯಂತ್ರಿಸುತ್ತದೆ. ಆದ್ದರಿಂದ, ಈ ಎಲೆಗಳನ್ನು ಪ್ರತಿದಿನ ಸೇವಿಸುವುದರಿಂದ ದೇಹದ ತೂಕವನ್ನು ನಿಯಂತ್ರಣದಲ್ಲಿಡಲು ಸಹಾಯ ಮಾಡುತ್ತದೆ
ಮಧುಮೇಹವನ್ನು ನಿಯಂತ್ರಿಸುತ್ತದೆ :
ಕರಿಬೇವಿನ ಎಲೆಗಳು ರಕ್ತದ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುವ ಗುಣಗಳನ್ನು ಹೊಂದಿವೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಕರಿಬೇವು ಸಹಾಯ ಮಾಡುತ್ತದೆ. ಮಧುಮೇಹಿಗಳು ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 5-6 ಕರಿಬೇವಿನ ಎಲೆಗಳನ್ನು ತಿನ್ನುವುದರಿಂದ ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಹಾಯವಾಗುತ್ತದೆ.
ಜೀರ್ಣಕ್ರಿಯೆಗೆ ಪ್ರಯೋಜನಕಾರಿ :
ಕರಿಬೇವಿನ ಎಲೆಗಳು ಉತ್ತಮ ಜೀರ್ಣಕ್ರಿಯೆಗೆ ಪ್ರಯೋಜನಕಾರಿಯಾದ ಫೈಬರ್ ಮತ್ತು ಇತರ ಪೋಷಕಾಂಶಗಳನ್ನು ಹೊಂದಿರುತ್ತವೆ. ಫೈಬರ್ ಮಲಬದ್ಧತೆಯನ್ನು ತಡೆಯಲು ಸಹಾಯ ಮಾಡಿ, ಹೊಟ್ಟೆಯನ್ನು ಸ್ವಚ್ಛವಾಗಿರಿಸುತ್ತದೆ.ಕರಿಬೇವಿನ ಎಲೆಯಲ್ಲಿರುವ ಇತರ ಪೋಷಕಾಂಶಗಳಾದ ವಿಟಮಿನ್ ಸಿ ಮತ್ತು ವಿಟಮಿನ್ ಎ ಕೂಡಾ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿಡಲು ಸಹಾಯ ಮಾಡುತ್ತದೆ.
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ :
ಉತ್ಕರ್ಷಣ ನಿರೋಧಕಗಳ ಹೊರತಾಗಿ, ಕರಿಬೇವಿನ ಎಲೆಗಳು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಇತರ ಪೋಷಕಾಂಶಗಳನ್ನು ಒಳಗೊಂಡಿರುತ್ತವೆ. ಇವುಗಳಲ್ಲಿ ವಿಟಮಿನ್ ಸಿ, ವಿಟಮಿನ್ ಎ ಮತ್ತು ಸತುವು ಸೇರಿವೆ. ವಿಟಮಿನ್ ಸಿ ಶಕ್ತಿಯುತವಾದ ಉತ್ಕರ್ಷಣ ನಿರೋಧಕವಾಗಿದ್ದು ಅದು ಪ್ರತಿರಕ್ಷಣಾ ವ್ಯವಸ್ಥೆಯ ಕೋಶಗಳ ಕಾರ್ಯವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.