ಬೆಂಗಳೂರು: ನೈತಿಕತೆ ಇಲ್ಲದ ಸರ್ಕಾರ ಸಿದ್ದರಾಮಯ್ಯ ಸರ್ಕಾರ. ಸಿದ್ದರಾಮಯ್ಯ ಬಡವರಿಗೆ ಮೋಸ ಮಾಡಿದ್ದಾರೆ. ತಲಾ ಹತ್ತು ಕೆಜಿ ಅಕ್ಕಿ ಕೊಡುತ್ತೇವೆ ಎಂದು ಹೇಳಿ ಈಗ ಜನಕ್ಕೆ ಮೋಸ ಮಾಡಿದ್ದೀರಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಕಿಡಿಕಾರಿದ್ದಾರೆ. ಹಣ ತಿನ್ನಲು ಆಗಲ್ಲ ಅಕ್ಕಿ ಕೊಡುತ್ತೇವೆ ಎಂದಿದ್ದರು. ಈಗ ಕೊಡಪ್ಪ ಅಕ್ಕಿನಾ. ನಾವು ಈ ವಿಚಾರವಾಗಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದರು.
ಹಣ ಹಾಕುವ ಡೋಂಗಿ ರಾಜಕಾರಣ ಸರಿಯಲ್ಲ. ಸರ್ಕಾರಕ್ಕೆ ಅಕ್ಕಿ ಕೊಡಲಾಗದೆ ಪರದಾಡುವ ಪರಿಸ್ಥಿತಿ ಉಂಟಾಗಿದೆ. ಚುನಾವಣಾ ಪೂರ್ವದಲ್ಲಿ ತಲಾ 10 ಕೆಜಿ ಅಕ್ಕಿ ಕೊಡ್ತೇವೆ ಎಂದಿದ್ದರು. ಕೇಂದ್ರ ಸರ್ಕಾರದ್ದು ಸೇರಿದಂತೆ ಒಟ್ಟು 15 ಕೆಜಿ ಅಕ್ಕಿ ಕೊಡಬೇಕಿತ್ತು. ಈಗ ರಾಜ್ಯ ಸರ್ಕಾರ ಅಕ್ಕಿ ಬದಲು ಹಣ ಹಾಕಲು ಹೊರಟಿದೆ. ಹಣ ಏನು ತಿನ್ನಲು ಆಗುತ್ತಾ ಅಂತಾ ಎಂದಿದ್ದಾರೆ.