ಆದಾಯಕ್ಕಿಂತ ಹೆಚ್ಚು ಅಸ್ತಿಗಳಿಕೆ ಆರೋಪದ ಮೇಲೆ ಹಾರೋಹಳ್ಳಿಯ ತಹಶೀಲ್ದಾರ್ವಿ ಜಿಯಣ್ಣ ಮನೆ ಮತ್ತು ಕಚೇರಿ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಕೋಲಾರ ಲೋಕಾಯುಕ್ತ ಎಸ್ಪಿ ನೇತೃತ್ವದಲ್ಲಿ 12 ಜನ ಅಧಿಕಾರಿಗಳ ತಂಡ ವಿಜಿಯಣ್ಣ ನಿವಾಸ ಹಾಗೂ ಕಚೇರಿಯಲ್ಲಿ ಶೋಧಕಾರ್ಯ ನಡೆಸುತ್ತಿದ್ದಾರೆ.
ಮೂಲತಃ ತುಮಕೂರು ಜಿಲ್ಲೆಯ ಅವರು ಮಂಡ್ಯದ ಮಳವಳ್ಳಿ, ಕೋಲಾರ, ಚಿಕ್ಕಬಳ್ಳಾಪುರದಲ್ಲಿ ತಹಶೀಲ್ದಾರ್ ಆಗಿ ಕಾರ್ಯನಿರ್ವಹಿಸಿ ಕಳೆದ ಎರಡು ವರ್ಷಗಳಿಂದ ಹಾರೋಹಳ್ಳಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅವರ ಮೇಲೆ ಆದಾಯಕ್ಕಿಂತ ಹೆಚ್ಚು ಆಸ್ತಿಯನ್ನು ಹೊಂದಿರುವ ಆರೋಪ ಕೇಳಿಬಂದಿದ್ದು, ಇದೀಗ ಲೋಕಾಯುಕ್ತ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಹಾರೋಹಳ್ಳಿ ಸೇರಿ 6ಕಡೆಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿರುವ ಅಧಿಕಾರಿಗಳು ಪರಿಶೀಲನೆ ಮುಂದುವರೆಸಿದ್ದಾರೆ.