ಬೆಂಗಳೂರು:- ಮಗು ದತ್ತು ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನು ಶ್ರೀನಿವಾಸ್ ಗೌಡಗೆ ಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಇದೀಗ ಬಿಗ್ಬಾಸ್ ಸ್ಪರ್ಧಿ ಸೋನು ಶ್ರೀನಿವಾಸ್ ಗೌಡಗೆ ಜಾಮೀನು ಮಂಜೂರು ಮಾಡಲಾಗಿದೆ. ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯ ಈ ಕುರಿತಾಗಿ ಆದೇಶ ಹೊರಡಿಸಿದೆ.
ಇಂದು ಅಥವಾ ನಾಳೆ ಜೈಲಿನಿಂದ ಸೋನು ಶ್ರೀನಿವಾಸ್ ಗೌಡ ಬಿಡುಗಡೆ ಸಾಧ್ಯತೆ ಇದೆ.
ಇನ್ನೂ ಇತ್ತೀಚೆಗೆ ಹೆಣ್ಣು ಮಗುವನ್ನು ಅಕ್ರಮವಾಗಿ ದತ್ತು ಪಡೆದುಕೊಂಡ ಆರೋಪದ ಮೇಲೆ ‘ಬಿಗ್ ಬಾಸ್’ ಖ್ಯಾತಿಯ ಸೋನು ಶ್ರೀನಿವಾಸ್ ಗೌಡ ಅವರನ್ನು ಪೊಲೀಸರು ಬಂಧಿಸಿ, ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದರು.