ಚೆನ್ನೈ: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಡಿಎಂಕೆ ಸಚಿವ ವಿ ಸೆಂಥಿಲ್ ಬಾಲಾಜಿ(Senthil Balaji)ಗೆ ವೈದ್ಯಕೀಯ ಆಧಾರದಲ್ಲಿ ಜಾಮೀನು ನೀಡಲು ಮದ್ರಾಸ್ ಹೈಕೋರ್ಟ್ ನಿರಾಕರಿಸಿದೆ. ಮದ್ರಾಸ್ ಹೈಕೋರ್ಟ್ನ ನ್ಯಾಯಮೂರ್ತಿ ಜಿ ಜಯಚಂದ್ರನ್ ಗುರುವಾರ ಜಾಮೀನು ನಿರಾಕರಿಸಿದ್ದಾರೆ. ಬಾಲಾಜಿ ಅವರ ಆರೋಗ್ಯದ ಆಧಾರದ ಮೇಲೆ ಜಾಮೀನು ಅರ್ಜಿ ಸಲ್ಲಿಸಲಾಗಿತ್ತು,
ಅವರು ಶಸ್ತ್ರಚಿಕಿತ್ಸೆಯ ನಂತರದ ತೊಡಕುಗಳು ಮತ್ತು ತೊಂದರೆಗಳನ್ನು ಉಲ್ಲೇಖಿಸಿ ವೈದ್ಯಕೀಯ ಆಧಾರದ ಮೇಲೆ ಜಾಮೀನು ಕೋರಿದ್ದರು. ಜೂನ್ 14ರಂದು ಇಡಿಯಿಂದ ಬಂಧನಕ್ಕೊಳಗಾದ ಕೂಡಲೇ ಅವರು ಬೈಪಾಸ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.ಇಡಿ ಮದ್ರಾಸ್ ಹೈಕೋರ್ಟ್ಗೆ ಸಲ್ಲಿಸಿದ ವಿವರವಾದ ಪ್ರತಿ ಅಫಿಡವಿಟ್ನಲ್ಲಿ ಸಚಿವ ವಿ ಸೆಂಥಿಲ್ಬಾಲಾಜಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದಾರೆ ಮತ್ತು ಆದ್ದರಿಂದ ವೈದ್ಯಕೀಯ ಆಧಾರದ ಮೇಲೆ ಜಾಮೀನು ಪಡೆಯಲು ಅರ್ಹರು ಎಂಬ ಹೇಳಿಕೆಯನ್ನು ನಿರಾಕರಿಸಿದೆ.