ಬೆಂಗಳೂರು:- ಬೆಂಗಳೂರಿನಲ್ಲಿ ಅಕ್ರಮ ವಾಸ ಮಾಡಿದ್ದ ಪಾಕ್ ಪ್ರಜೆಗಳಿಗೆ ಸಹಾಯ ಮಾಡಿದ್ದ
UP ಮೂಲದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ
ಪಾಕಿಸ್ತಾನ ಪ್ರಜೆಗಳು ಬೆಂಗಳೂರಿನಲ್ಲಿ ನೆಲೆಸಲು ಸಹಾಯ ಮಾಡಿದ್ದ ಆರೋಪಿಯನ್ಬ ಅರೆಸ್ಟ್ ಮಾಡಲಾಗಿದೆ.
ಬಂಧಿತ ವ್ಯಕ್ತಿಯನ್ನು ಪರ್ವೇಜ್ ಅಹ್ಮದ್ ಎಂದು ಗುರುತಿಸಲಾಗಿದೆ. ಹಿಂದೂ ಹೆಸರುಗಳನ್ನಿಟ್ಟುಕೊಂಡು ಬೆಂಗಳೂರಿನಲ್ಲಿ ನೆಲಸಿದ್ದ ಐದಕ್ಕೂ ಹೆಚ್ಚು ಮಂದಿ ಪಾಕಿಸ್ತಾನಿ ಪ್ರಜೆಗಳನ್ನು ಕಳೆದ ವಾರ ಬೆಂಗಳೂರು ಪೊಲೀಸರು ಬಂಧಿಸಿದ್ದರು.
ಆನೆಕಲ್ ತಾಲೂಕಿನ ಜಿಗಣಿಯಲ್ಲಿ ವಾಸವಾಗಿದ್ದ ರಷೀದ್ ಅಲಿ ಸಿದ್ದಕಿ ಕುಟುಂಬ ಮತ್ತು ಪೀಣ್ಯದಲ್ಲಿ ವಾಸವಾಗಿದ್ದ ಕುಟುಂಬವನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಅಕ್ರಮವಾಗಿ ಭಾರತದ ಒಳಗೆ ನುಸುಳಿ, ಇಲ್ಲಿಯ ಆಧಾರ ಕಾರ್ಡ್, ಪ್ಯಾನ್ ಕಾರ್ಡ್ ಮತ್ತು ಪಾಸಪೋರ್ಟ್ ಮಾಡಿಸಿಕೊಂಡಿದ್ದಾರೆ.
ಆರೋಪಿಗಳು ದಾಖಲಾತಿಗಳನ್ನು ಹೊಂದಲು ಸಹಾಯ ಮಾಡಿದವರನ್ನು ಪತ್ತೆ ಹಚ್ಚಲು ಜಿಗಣಿ ಪೊಲೀಸರು ಎರಡು ತಂಡಗಳಾಗಿ ಮುಂಬೈ ಮತ್ತು ದೆಹಲಿಗೆ ತೆರಳಿದ್ದರು. ಇದೀಗ, ಜಿಗಣಿ ಪೊಲೀಸರು ಪಾಕಿಸ್ತಾನಿ ಪ್ರಜೆಗಳು ಭಾರತೀಯ ದಾಖಲಾತಿ ಹೊಂದಲು ಸಹಾಯ ಮಾಡಿದ ಪರ್ವೇಜ್ ಅಹ್ಮದ್ನನ್ನು ಮುಂಬೈನಲ್ಲಿ ಬಂಧಿಸಿದ್ದಾರೆ.
ಬಂಧಿತ ಆರೋಪಿಗಳು ಅಂತರಾಷ್ಟ್ರೀಯ ಮೆಹದಿ ಫೌಂಡೇಶನ್ನೊಂದಿಗೆ ಸಂಪರ್ಕ ಹೊಂದಿದ್ದಾರೆ. ಪರ್ವೇಜ್ 2007ರಿಂದ ಎಮ್ಎಫ್ಐ ಜೊತೆ ಸಂಪರ್ಕ ಹೊಂದಿದ್ದಾನೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.