ಚಿತ್ರದುರ್ಗ: ಅನೈತಿಕ ಸಂಬಂಧ ಹಿನ್ನೆಲೆ ಕಲ್ಲು ಎತ್ತಿ ಹಾಕಿ ಪತ್ನಿಯಿಂದಲೇ ಪತಿಯ ಹತ್ಯೆಯಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು ಕಂಬದೇವರಹಟ್ಟಿಯಲ್ಲಿ ನಡೆದಿದೆ. ಕೃಷ್ಣಪ್ಪ (46) ಪತ್ನಿ ಯಿಂದ ಕೊಲೆಯಾದ ಪತಿಯಾಗಿದ್ದು, ಕಮಲಮ್ಮ ಆರೋಪಿಯಾಗಿದ್ದಾರೆ.
ಅನೈತಿಕ ಸಂಬಂಧ ಹೊಂದಿದ್ದಾನೆಂದು ಮನೆಯ ಮುಂಭಾಗ ಮಲಗಿದ್ದ ವೇಳೆ ಪತಿಯ ಮೇಲೆ ತಡರಾತ್ರಿ ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾರೆ. ಇನ್ನೂ ಸ್ಥಳಕ್ಕೆ ಚಿತ್ರದುರ್ಗ DYSP ದಿನಾಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಸಂಬಂಧ ಹೊಳಲ್ಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.