ಬೆಂಗಳೂರು ;- ಹಿರಿಯ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣವನ್ನು ಬೆಂಗಳೂರಿನ ಹೈಕೋರ್ಟ್ ರದ್ದುಪಡಿಸಿ ಆದೇಶ ನೀಡಿದೆ.
ತನ್ನ ವಿರುದ್ಧ ಸಿಬಿಐ ದಾಖಲಿಸಿದ್ದ ಪ್ರಕರಣ ರದ್ದು ಕೋರಿ ಅಜಯ್ ಹಿಲೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ತಿರ್ಪುನ್ನು ಕಾಯ್ದಿರಿಸಿದ್ದು, ಶುಕ್ರವಾರ ಪ್ರಕಟಿಸಿತು. ಅರ್ಜಿದಾರರನ್ನು ಈಗಾಗಲೇ ಇಲಾಖಾ ವಿಚಾರಣೆಯಲ್ಲಿ ದೋಷಮುಕ್ತಗೊಳಿಸಲಾಗಿದೆ. ಆ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ತೀರ್ಪು ಆಧರಿಸಿ ಪ್ರಕರಣ ರದ್ದು ಗೊಳಿಸಲಾಗುತ್ತಿದೆ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಅರ್ಜಿದಾರರು 2020ರ ಸೆ.9ರಂದು ತಮ್ಮ ವಿರುದ್ಧ ವಿಚಾರಣೆಗೆ ಸರ್ಕಾರ ಪೂರ್ವಾನುಮತಿ ನೀಡಿದ್ದನ್ನು ಮತ್ತು 2020ರ ಜ.7ರಂದು ಸಿಬಿಐ ತನಿಖೆಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು.