ಬೆಂಗಳೂರು: ಕಾಲಮಿತಿಯಲ್ಲಿ ವಸತಿ ಯೋಜನೆಗಳ ಅನುಷ್ಠಾನಕ್ಕೆ ಸಚಿವ ಜಮೀರ್ ಅಹಮದ್ ಖಾನ್ ಅವರು ಅಧಿಕಾರಿಗಳಿಗೆ ಗಡುವು ನೀಡಿದ್ದಾರೆ. ಬೆಂಗಳೂರಿನ ಕಚೇರಿಯಲ್ಲಿ ಇಲಾಖೆಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ವಸತಿ ಸಚಿವ ಜಮೀರ್, ಒಂದೊಂದು ಯೋಜನೆ ವರ್ಷಗಳ ಕಾಲ ವಿಳಂಬ ಆದರೆ ಬಡವರಿಗೆ ಸೂರು ಕಲ್ಪಿಸುವ ಉದ್ದೇಶ ಈಡೇರುವುದಿಲ್ಲ.
ಯಾವುದೇ ಕಾರಣಕ್ಕೂ ವಿಳಂಬ ಸಹಿಸುವುದಿಲ್ಲ ಎಂದು ತಾಕೀತು ಮಾಡಿದರು. ಒಂದೊಂದು ಯೋಜನೆಗೆ ನಿಗದಿತ ಕಾಲಮಿತಿ ಹಾಕಿಕೊಂಡು ಅದನ್ನು ಪೂರ್ಣಗೊಳಿಸಿದ ಬಳಿಕವೇ ಮತ್ತೊಂದು ಯೋಜನೆ ಕೈಗೆತ್ತಿಕೊಳ್ಳಬೇಕು.
ಪ್ರತಿ ಯೋಜನೆಗೆ ಬೇಕಾದ ಹಣಕಾಸು ಹೊಂದಿಕೊಂಡು ಪೂರ್ಣಗೊಳಿಸಿ ಫಲಾನುಭವಿಗಳಿಗೆ ಹಂಚಿಕೆ ಆದ ನಂತರವಷ್ಟೇ ಮತ್ತೊಂದು ಯೋಜನೆ ಪ್ರಾರಂಭಿಸಬೇಕು. ಆಗ ಮಾತ್ರ ನಂಬಿಕೆ ಬರಲು ಸಾಧ್ಯ. ಇದು ಕಡ್ಡಾಯವಾಗಿ ಪಾಲನೆ ಆಗಲೇಬೇಕು ಎಂದು ಸೂಚನೆ ನೀಡಿದರು.