ಬೆಂಗಳೂರು ;-ಕಾರಣಾಂತರಗಳಿಂದ ಗೃಹಲಕ್ಷ್ಮಿ ಯೋಜನೆ ಜಾರಿ ವಿಳಂಬ ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಈಗಾಗಲೇ 3 ಯೋಜನೆ ಜಾರಿಗೊಳಿಸಿದ್ದೇವೆ. ನವೆಂಬರ್- ಡಿಸೆಂಬರ್ನಿಂದ ಯುವ ನಿಧಿ ಯೋಜನೆ ಜಾರಿಗೊಳಿಸುತ್ತೇವೆ ಎಂದರು.
ಗೃಹಲಕ್ಷ್ಮಿ ಯೋಜನೆ ಜಾರಿಗೆ ಸಲ್ಪ ಸಮಯ ಬೇಕಿದೆ. ಮನೆ ಕುಟುಂಬದ ಯಜಮಾನಿಗೆ 2 ಸಾವಿರ ರೂಪಾಯಿ ಹಾಕಬೇಕಿರುವುದರಿಂದ ಅವರ ಬಗ್ಗೆ ಮಾಹಿತಿ ಸಂಗ್ರಹಿಸಲು ಸಮಯಾವಕಾಶ ಬೇಕಾಗಿದೆ. ಹಾಗಾಗಿ ಸ್ವಲ್ಪ ವಿಳಂಬವಾಗಿದೆ. ಆಗಸ್ಟ್ 16ರಿಂದ ಗೃಹಲಕ್ಷ್ಮಿ ಯೋಜನೆಯನ್ನು ಜಾರಿಗೆ ತರಲಾಗುವುದು ಎಂದು ಹೇಳಿದರು.