ಮಂಡ್ಯ: ಕೇಂದ್ರ ಬೃಹತ್ ಕೈಗಾರಿಕಾ ಸಚಿವ, ಮಂಡ್ಯ ಸಂಸದ ಕುಮಾರಸ್ವಾಮಿ ಅವರು ಇಂದು ಬೆಳಗ್ಗೆ ನಾಗಮಂಗಲಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು, ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆಯನ್ನು ನಾನು ಉಗ್ರವಾಗಿ ಖಂಡಿಸುತ್ತೇನೆ.
ಮುಖ್ಯಮಂತ್ರಿಗಳನ್ನು ಕೆಳಗಿಳಿಸಲು ಈ ರೀತಿಯ ಕೆಲಸವಾಗುತ್ತಿರಬಹುದು ಎಂದರು.
ವೀರೇಂದ್ರ ಪಾಟೀಲ್ ಅವರು ಮುಖ್ಯಮಂತ್ರಿಯಾಗಿದ್ದ ವೇಳೆ ರಾಮನಗರ, ಚನ್ನಪಟ್ಟಣದಲ್ಲಿ ಕಾಂಗ್ರೆಸ್ ನಾಯಕರೇ ಬೆಂಕಿ ಹಚ್ಚಿಸಿ ಗಲಭೆ ಮಾಡಿಸಿದ್ದರು. ಈಗ ನಾಗಮಂಗಲದಲ್ಲಿ ಗಲಭೆ ಮಾಡಿಸಲಾಗಿದೆ. ಆದರೆ, ಕೆಲವರು ಮುಖ್ಯಮಂತ್ರಿ ಕುರ್ಚಿ ಖಾಲಿ ಇಲ್ಲ ಎಂದು ಹೇಳುತ್ತಾರೆ. ಇನ್ನೂ ಕೆಲವರು ಮುಖ್ಯಮಂತ್ರಿ ಕುರ್ಚಿಗಾಗಿ ಟವೆಲ್ ಹಾಕಿದ್ದಾರೆ ಎಂದು ಹೇಳಿದರು.
ನಾಗಮಂಗಲದಲ್ಲಿ ಗಣೇಶ ಕೂರಿಸಿದವರನ್ನೇ ಎ1 ಮಾಡಿದ್ದಾರೆ. ಲೋಪ ಮುಚ್ಚಿಕೊಳ್ಳಲು ಸಿಕ್ಕ ಸಿಕ್ಕವರನ್ನು ಅರೆಸ್ಟ್ ಮಾಡಿದ್ದಾರೆ. ನಮ್ಮ ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ. ಅಮಾಯಕರನ್ನು ಬಂಧಿಸಿರುವುದು ತಪ್ಪು. ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ ಗಲಭೆಯ ಸ್ಪಾನ್ಸರ್ ‘ಕೈ’ ನಾಯಕರು. ಆ ಘಟನೆಯಿಂದ ಜೈಲಿಗೆ ಹೋದವರು ಈಗ ಏನು ಮಾಡ್ತಿದ್ದಾರೆ. ಈ ರೀತಿ ನಾಗಮಂಗಲದಲ್ಲೂ ಆಗಬೇಕಾ ಎಂದು ಪ್ರಶ್ನಿಸಿದರು.