ಕಂಪ್ಲಿಯಲ್ಲಿ ರಾತ್ರಿ ಸುರಿದ ಮಳೆಗೆ ಜನತೆ ಫುಲ್ ಖುಷ್ ಆಗಿದ್ದಾರೆ. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ಮಳೆ ತಂಪೆರೆದಿದೆ. ಕಳೆದ ಮೂರು ತಿಂಗಳಿಂದ ಬಿಸಿಲಿನ ತಾಪಕ್ಕೆ ಜನತೆ ಹೈರಾಣಾಗಿದ್ದರು.
ಕಳೆದ ಎರಡು ದಿನಗಳಿಂದ ಗುಡುಗು,ಮಿಂಚು ಸಹಿತ ಜೋರು ಮಳೆ ಸುರಿಯುತ್ತಿದೆ. ಮಳೆಯಿಂದ ಜಿಲ್ಲೆಯ ಬಹುತೇಕ ಕಡೆ ತಂಪು ವಾತಾವರಣ ಕಂಡುಬಂದಿದೆ. ಮಳೆಯ ಆಗಮನದಿಂದ ಜನತೆ ಸಂತಸಗೊಂಡಿದ್ದಾರೆ.