ಮುಂದಿನ 48 ಗಂಟೆಗಳಲ್ಲಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು ಇದರ ಬೆನ್ನಲ್ಲೇ ಇಂದು ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಅಬ್ಬರ ಶುರುವಾಗಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದ್ದು, ವಾಹನ ಸವಾರರು ಪರದಾಡುವಂತಾಗಿದೆ. ರಾಜಧಾನಿ ಬೆಂಗಳೂರು, ಉಡುಪಿ, ಮೈಸೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಶಿವಮೊಗ್ಗ, ಬಳ್ಳಾರಿ, ವಿಜಯನಗರ, ಕೊಪ್ಪಳ,
ಧಾರವಾಡ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಮಳೆ ಶುರುವಾಗಿದೆ. ಹೀಗಾಗಿ ಮಳೆಯಿಂದಾಗಿ ಜನರು, ಬೈಕ್ ಸವಾರರು ಪರದಾಡುವಂತ್ತಾಗಿದ್ದು, ಇಂದು ಬೆಳ್ಳಗೆಯಿಂದಲೇ ಬೆಂಗಳೂರಿನಲ್ಲಿ ಜಿಟಿಜಿಟಿ ಮಳೆ ಆರಂಭವಾಗಿದ್ದು, ಸತತ ಸುರಿಯುತ್ತಿರುವ ಮಳೆಯಿಂದಾಗಿ ಆಫೀಸು, ಅಂಗಡಿಗಳಿಗೆ ಹೋಗುವ ಬೈಕ್ ಸವಾರರು ಪರದಾಡುವಂತ್ತಾಗಿದೆ.
ಇನ್ನೂ ಸಂಜೆ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ.ಎಚ್ಎಎಲ್ನಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 33.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.