ಶಿಡ್ಲಘಟ್ಟ: ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿಎನ್ ರವಿಕುಮಾರ್ ಪರ 14ನೇ ವಾರ್ಡಿನ ಜೆಡಿಎಸ್ ಮುಖಂಡರು ಹಾಗು ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ ಮತಯಾಚಿಸಿದರು.
ಕ್ಷೇತ್ರದಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಕಾಂಗ್ರೆಸ್, ಜೆಡಿಎಸ್ ಹಾಗು ಬಿಜೆಪಿಯ ಪಕ್ಷಗಳು ವಿವಿಧ ರೀತಿಯಲ್ಲಿ ಮತ ಪ್ರಚಾರದಲ್ಲಿ ತೊಡಗಿದ್ದಾರೆ. ಜೆಡಿಎಸ್ ಪರ ನಗರದಲ್ಲಿ ಪ್ರಚಾರ ಜೋರಾಗಿದ್ದು,
ಮಹಿಳಾ ಮುಖಂಡರಾದ ಸುಷ್ಮಾ ಶ್ರೀನಿವಾಸ್ 14 ನೇ ವಾರ್ಡಿನಲ್ಲಿ ಮತ ಪ್ರಚಾರ ನಡೆಸಿದರು. ನಂತರ ಮಾತನಾಡಿದ ಅವರು ಬಿ ಎನ್ ರವಿಕುಮಾರ್ ಕಳೆದ ಬಾರಿ ಕಡಿಮೆ ಮತಗಳ ಅಂತರದಿಂದ ಸೋತಿದ್ದರು. ಈ ಬಾರಿ ಅಪಾರ ಜನ ಬೆಂಬಲ ವ್ಯಕ್ತವಾಗುತ್ತಿದೆ, ಕಳೆದ ಬಾರಿ ಸೋತರೂ ತಮ್ಮ ಸೇವೆಯನ್ನು ಮುಂದುವರೆಸಿ ಮತ ಕ್ಷೇತ್ರದ ಅನೇಕರಿಗೆ ಕಷ್ಟದಲ್ಲಿ ನೆರವಾಗುವ ಮೂಲಕ ಮನೆ ಮಾತಾಗಿದ್ದಾರೆ.
ಈ ಬಾರಿ ಅವರನ್ನು ಗೆಲ್ಲಿಸುವ ಮೂಲಕ ಅವರಿಗೆ ಸೇವೆ ಮಾಡಲು ಮತ್ತಷ್ಟು ಅವಕಾಶ ಕಲ್ಪಿಸಿಕೊಡಬೇಕು ಎಂದು ಮನವಿ ಮಾಡಿದರು. ಬಡವರ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಜೆಡಿಎಸ್ ಪಕ್ಷವು ಪಂಚರತ್ನ ಯೋಜನೆಯನ್ನು ರೂಪಿಸಿದ್ದು, ರೈತರು, ಮಹಿಳೆಯರ ಹಾಗು ವಿದ್ಯಾರ್ಥಿಗಳ ಅಬ್ಯುದಯಕ್ಕಾಗಿ ಪಣ ತೊಟ್ಟಿದೆ,
ಹೆಚ್.ಡಿ.ಕುಮಾರಸ್ವಾಮಿ ಅವರು ಎರಡು ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಸಂದರ್ಭದಲ್ಲಿ ನಾಡಿನ ಎಲ್ಲಾ ವರ್ಗದವರ ಕಲ್ಯಾಣಕ್ಕಾಗಿ ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೊಟ್ಟು ನುಡಿದಂತೆ ನಡೆದಿದ್ದಾರೆ.
ಅಭಿವೃದ್ಧಿಯಲ್ಲಿ ಮೂಲೆ ಗುಂಪಾಗಿರುವ ನಮ್ಮ ಕ್ಷೇತ್ರದಲ್ಲಿ ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಬೇಕು ಸ್ಥಳೀಯರಾದ ರವಿ ಅಣ್ಣ ನವರಿಗೆ ಮತ ಹಾಕಿದರೆ ಮಾತ್ರ ಕ್ಷೇತ್ರ ಅಭಿವೃದ್ಧಿಯತ್ತ ಸಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ಮುಖಂಡರಾದ ಬಾಲಕೃಷ್ಣ, ಮುಖಂಡರಾದ ಖಾಧೀರ್ ಪಾಷ, ಮುಜಾಯಿದ್,ವಾಲಿಬಾಲ್ ಬಾಬು, ಸನವುಲ್ಲ,ದಸ್ತು, ಸಾಧಿಕ್,ಅಶ್ರಪ್, ಸೇರಿದಂತೆ ಮತ್ತಿತರರು ಹಾಜರಾಗಿದ್ದರು.