ಸಿಎಂ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ಕ್ಷೇತ್ರದ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ವಾಂತಿ-ಭೇದಿಯಾಗಿ 114 ಮಂದಿ ಅಸ್ವಸ್ಥರಾಗಿದ್ದಾರೆ. 94 ಮಂದಿಗೆ ಚಿಕಿತ್ಸೆ ಮುಂದುವರೆದಿದೆ.
114 ಜನರ ಪೈಕಿ ಮೂವರಲ್ಲಿ ಕಾಲರ ರೋಗ ಪತ್ತೆಯಾಗಿದೆ. ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಗ್ರಾಮಸ್ಥರಿಗೆ ಧೈರ್ಯ ತುಂಬಿ, ಸೂಕ್ತ ವ್ಯವಸ್ಥೆ ಬಗ್ಗೆ ಭರವಸೆ ನೀಡಿದ್ದಾರೆ.
ಡಾ.ಹೆಚ್.ಸಿ ಮಹದೇವಪ್ಪ ಅವರು ಗ್ರಾಮದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ನೀತಿ ಸಂಹಿತೆ ಜಾರಿಯಲ್ಲಿ ಇರುವುದರಿಂದ ಗ್ರಾಮಕ್ಕೆ ಭೇಟಿ ನೀಡಲು ಸಾಧ್ಯವಾಗಲಿಲ್ಲ. ದೂರವಾಣಿ ಮೂಲಕ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೀತಿ ಸಮಿತಿಗೂ ಇದಕ್ಕೂ ಯಾವುದೇ ಸಂಬಂಧವಿಲ್ಲ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ್ರು.