ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೆಚ್ಚಾಗಿರುವ ಕ್ರೈಂ ಚಟುವಟಿಕೆ ಹಾಗೂ ಗಾಂಜಾ ಪ್ರಕರಣಗಳ ಹಿನ್ನಲೆಯಲ್ಲಿ ಪೊಲೀಸರು ಬೆಳ್ಳಂ ಬೆಳ್ಳಗೆ ರೌಡಿಶೀಟರ್ಗಳಿಗೆ ಶಾಕ್ ನೀಡಿದ್ದಾರೆ. ನೂತನ ಬೆಂಗಳೂರು ಪೊಲೀಸ್ ಆಯುಕ್ತ ದಯಾನಂದ್ ಸೂಚನೆ ಮೇರೆಗೆ ದಾಳಿ ನಗರದ 8 ವಿಭಾಗದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿಶೀಟರ್ಗಳ ಮನೆ ಮೇಲೆ ದಾಳಿ ಮಾಡಲಾಗಿದ್ದು,
1 ಸಾವಿರಕ್ಕೂ ಹೆಚ್ಚು ರೌಡಿಶೀಟರ್ಗಳ ಮನೆಗಳಲ್ಲಿ ಪರಿಶೀಲನೆ ಮಾಡಲಾಗಿದೆ. ದಾಳಿ ವೇಳೆ ಹಲವರ ಮನೆಗಳಲ್ಲಿ ಮಾರಕಾಸ್ತ್ರಗಳು, ಗಾಂಜಾ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಬೆಂಗಳೂರು ಪೂರ್ವ ವಿಭಾಗದ ಪೋಲಿಸರು ಹಲಸೂರು, ಪುಲಕೇಶಿನಗರ, ಡಿಜೆ ಹಳ್ಳಿ, KG ಹಳ್ಳಿ ಠಾಣಾ ವ್ಯಾಪ್ತಿಯ ರೌಡಿಶೀಟರ್ಗಳ ಮನೆಗಳ ಮೇಲೆ ಡಿಸಿಪಿ ಭೀಮಾಶಂಕರ ಗುಳೇದ್ ನೇತೃತ್ವದಲ್ಲಿ ದಾಳಿ ಮಾಡಿ ಮಾಡಿದ್ದು, ಪರಿಶೀಲನೆ ನಡೆಸಿದ್ದಾರೆ.