ಬೆಂಗಳೂರು ವಾಲ್ಮೀಕಿ ನಿಗಮದ ಹಗರಣ ಕೇಸ್ ಗೆ ಸಂಬಂಧಿಸಿದಂತೆ SIT 10 ಕೆಜಿ ಚಿನ್ನದ ಬಿಸ್ಕೆಟ್ ಜಪ್ತಿ ಮಾಡಿದೆ.
ಹಗರಣದ ಪ್ರಧಾನ ಆರೋಪಿ ಸತ್ಯನಾರಾಯಣ ವರ್ಮಾನ ಮನೆಯಲ್ಲಿ ಚಿನ್ನದ ಬಾಸ್ಕೆಟ್ ಪತ್ತೆಯಾಗಿದೆ. ಬರೋಬ್ಬರಿ 10 ಕೆ.ಜಿ.ಚಿನ್ನದ ಬಿಸ್ಕೆಟ್ಗಳನ್ನು ಎಸ್ಐಟಿ ತಂಡ ವಶಕ್ಕೆ ಪಡೆದಿದೆ.
ಆರೋಪಿ ಸತ್ಯನಾರಾಯಣ್ ವರ್ಮಾ ವಾಲ್ಮೀಕಿ ಹಗರಣದ ಹಣದಲ್ಲೇ ಚಿನ್ನ ಖರೀದಿಸಿದ್ದ. ಎಸ್ಐಟಿ ತಂಡ ತೀವ್ರ ವಿಚಾರಣೆಗೆ ಒಳಪಡಿಸಿದ್ದ ವೇಳೆ 15 ಕೆ.ಜಿ.ಗೋಲ್ಡ್ ಕೊಡುವುದಾಗಿ ಹೇಳಿದ್ದ. ಅದರಂತೆ ತನ್ನ ಹೈದರಾಬಾದ್ ಪ್ಲಾಟ್ ನಲ್ಲಿ 10 ಕೆ.ಜಿ.ಚಿನ್ನದ ಗಟ್ಟಿ ಇಟ್ಟಿರುವುದನ್ನು ತೋರಿಸಿದ್ದಾನೆ. ಉಳಿದ ಚಿನ್ನದ ಬಿಸ್ಕೆಟ್ ಗಾಗಿ ಎಸ್ಐಟಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಆರೋಪಿ ವರ್ಮಾ ಇದುವರೆಗೂ ವಾಲ್ಮೀಕಿ ಹಗರಣದ ಹಣದಿಂದ ಬರೋಬ್ಬರಿ 35 ಕೆ.ಜಿ.ಚಿನ್ನದ ಬಿಸ್ಕೆಟ್ ಖರೀದಿ ಮಾಡಿರುವ ಬಗ್ಗೆ ಮಾಹಿತಿ ಸಿಕ್ಕಿದೆ.