PrajatvkannadaPrajatvkannada
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Subscribe to Updates

Get the latest creative news from FooBar about art, design and business.

What's Hot

ಎಸ್​ಎಸ್​ಎಲ್​ಸಿಗೆ ಮೂರು ಬಾರಿ ಎಕ್ಸಾಂ ಮಾಡಲು ನಿರ್ಧಾರ – ಮಧು ಬಂಗಾರಪ್ಪ

September 24, 2023

ತುಳುವಿನಲ್ಲಿ ಒಡು ಪೊಗ್ಗುನಿ ಅನ್ನುತ್ತಾರೆ. ಜೆಡಿಎಸ್ ಎಲ್ಲೆಲ್ಲಿ ಹೋಗಿದ್ದಾರೊ ಅಲ್ಲಿ ಅದರ ಕಥೆ ಮುಗಿಯಿತು ಎಂದು ಲೆಕ್ಕ -ವೀರಪ್ಪ ಮೊಯ್ಲಿ

September 24, 2023

ಯೋಜನೆಗಳ ಹೆಸರಲ್ಲಿ ಕೊಳ್ಳೆ ಹೊಡೆಯುವ ಹುನ್ನಾರ ಕಾಂಗ್ರೆಸ್ ಸರ್ಕಾರದ್ದು – ಹೆಚ್ ಡಿಕೆ

September 24, 2023
Facebook Twitter Instagram
Monday, September 25
Facebook Instagram YouTube
PrajatvkannadaPrajatvkannada
Demo
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ
PrajatvkannadaPrajatvkannada
Home » ಸಿಎಂ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ: ಜಿ.ಹೆಚ್. ತಿಪ್ಪಾರೆಡ್ಡಿ
ಜಿಲ್ಲೆ Prajatv KannadaBy Prajatv KannadaMarch 2, 2023

ಸಿಎಂ ಅವರಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ: ಜಿ.ಹೆಚ್. ತಿಪ್ಪಾರೆಡ್ಡಿ

Facebook Twitter WhatsApp Reddit Email Telegram
Share
Facebook Twitter WhatsApp LinkedIn Email

ಚಿತ್ರದುರ್ಗ, ಮಾ.02- ಮಾ. 04 ರಂದು ಫಲಾನುಭವಿಗಳ ಸಮಾವೇಶದ ಜೊತೆಗೆ ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ನೆರವೇರಿಸಲಿದ್ದಾರೆ ಎಂದು ಶಾಸಕ ಜಿ ಹೆಚ್. ತಿಪ್ಪಾರೆಡ್ಡಿ ಹೇಳಿದರು. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ವಿವಿಧ ಇಲಾಖೆಗಳಡಿ ಸುಮಾರು 2 ಸಾವಿರ ಕೋಟಿ ರೂ. ಗಳ ಅಭಿವೃದ್ಧಿ ಯೋಜನೆಗಳಿಗೆ ಅಂದು ಮುಖ್ಯಮಂತ್ರಿಗಳು ಚಾಲನೆ ನೀಡಲಿದ್ದು, ಈ ಕುರಿತಂತೆ ಆಯಾ ಇಲಾಖಾವಾರು ಕಾಮಗಾರಿಗಳು ಹಾಗೂ ಅನುದಾನದ ವಿವರವನ್ನು ಪಡೆದುಕೊಳ್ಳಬೇಕು.

500 ಕೋಟಿ ರೂ. ವೆಚ್ಚದಲ್ಲಿ ವೈದ್ಯಕೀಯ ಕಾಲೇಜು, 47 ಕೋಟಿ ರೂ. ವೆಚ್ಚದಲ್ಲಿ ಜಿಲ್ಲಾಡಳಿತ ಭವನ, 593 ಕೋಟಿ ರೂ. ವೆಚ್ಚದಲ್ಲಿ ಬಹುಗ್ರಾಮ ಕುಡಿಯುವ ನೀರು ಯೋಜನೆ, ಲೋಕೋಪಯೋಗಿ ಇಲಾಖೆಯಡಿ ಸುಮಾರು 200 ಕೋಟಿ ರೂ. ಯೋಜನೆಯ ಕಾಮಗಾರಿಗಳಿಗೆ ಶಂಕುಸ್ಥಾಪನೆ, ಸುಮಾರು 90 ಕೋಟಿ ರೂ. ವೆಚ್ಚದಲ್ಲಿ ವಿವಿಧ ವಸತಿ ಯೋಜನೆಗಳಡಿ ಮನೆಗಳು, 40 ಕೋಟಿ ರೂ. ವೆಚ್ಚದಲ್ಲಿ ನಗರೋತ್ಥಾನ ಯೋಜನೆ ಕಾಮಗಾರಿಗಳು, ನಗರದಲ್ಲಿ ವಾಲ್ಮೀಕಿ ಭವನ, ಲಿಡ್ಕರ್ ಭವನಗಳ ಉದ್ಘಾಟನೆ ಸೇರಿದಂತೆ ವಿವಿಧ ಇಲಾಖೆಗಳಡಿ ಹಲವಾರು ಕಾಮಗಾರಿಗಳಿಗೆ ಮುಖ್ಯಮಂತ್ರಿಗಳು ಅದೇ ದಿನದಂದು ಚಾಲನೆ ನೀಡುವರು.ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಲು ಎಲ್ಲ ಅಧಿಕಾರಿಗಳು ಸೂಕ್ತ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ನಂತರ,ಪ್ರವಾಸೋದ್ಯಮ ಇಲಾಖೆ ನಿರ್ದೇಶಕ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ವಿ.ರಾಮ್ ಪ್ರಸಾತ್ ಮನೋಹರ್ ಮಾತನಾಡಿ, ಕಾರ್ಯಕ್ರಮದಲ್ಲಿ ಸೂಕ್ತ ಊಟದ ವ್ಯವಸ್ಥೆ, ಕುಡಿಯುವ ನೀರು ಹಾಗೂ ಫಲಾನುಭವಿಗಳನ್ನು ಸುರಕ್ಷತೆಯಿಂದ ಕರೆತಂದು ವಾಪಸ್ ಕರೆದುಕೊಂಡು ಹೋಗುವವರೆಗಿನ ಎಲ್ಲ ವ್ಯವಸ್ಥೆಯೂ ಸಮರ್ಪಕವಾಗಿರುವಂತೆ ಯೋಜನೆ ರೂಪಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಡಿ ಲಕ್ಷಾಂತರ ಜನರು ವಿವಿಧ ಸವಲತ್ತುಗಳನ್ನು ಪಡೆದು ಫಲಾನುಭವಿಗಳಾಗಿದ್ದಾರೆ. ರೈತರು, ಮಹಿಳೆಯರು, ವಿದ್ಯಾರ್ಥಿಗಳು, ಪರಿಶಿಷ್ಟರು, ಹಿಂದುಳಿದ ವರ್ಗದವರು ಹೀಗೆ ಎಲ್ಲ ವರ್ಗಗಳ ಜನರು ಸರ್ಕಾರದ ವಿವಿಧ ಯೋಜನೆಗಳಡಿ ಒಂದಲ್ಲ ಒಂದು ಸೌಲಭ್ಯ ಪಡೆದುಕೊಂಡಿದ್ದಾರೆ.

ಎಲ್ಲ ಜಿಲ್ಲೆಗಳಲ್ಲಿ ಫಲಾನುಭವಿಗಳ ಸಮಾವೇಶ ಆಯೋಜನೆಗೆ ಸರ್ಕಾರ ಸೂಚನೆ ನೀಡಿದ್ದು, ಇಲ್ಲಿನ ಸರ್ಕಾರಿ ವಿಜ್ಞಾನ ಕಾಲೇಜು ಮೈದಾನದಲ್ಲಿ ನಡೆಯುವ ಕಾರ್ಯಕ್ರಮವೇ ಮೊದಲ ಸಮಾವೇಶವಾಗಿದೆ. ಮುಖ್ಯಮಂತ್ರಿಗಳೇ ಖುದ್ದಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವುದರಿಂದ, ಸಮಾವೇಶ ಯಶಸ್ವಿಗೊಳಿಸಲು ಅಧಿಕಾರಿಗಳು ಸಕ್ರಿಯವಾಗಿ ತೊಡಗಿಸಿಕೊಂಡು, ಕ್ರಿಯಾಶೀಲರಾಗಿ ಕೆಲಸ ಮಾಡಬೇಕು. ಕೃಷಿ, ಆರೋಗ್ಯ, ಶಿಕ್ಷಣ, ಸಹಕಾರ, ಆಹಾರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ, ಸಮಾಜ ಕಲ್ಯಾಣ, ತೋಟಗಾರಿಕೆ, ಸ್ಲಂ ಬೋರ್ಡ್ ಸೇರಿದಂತೆ ವಿವಿಧ ಇಲಾಖೆಗಳಿಂದ ಕನಿಷ್ಟ 75 ಸಾವಿರದಿಂದ 01 ಲಕ್ಷದವರೆಗೆ ಫಲಾನುಭವಿಗಳನ್ನು ಸಮಾವೇಶಕ್ಕೆ ಸೇರಿಸಲು ಆಯಾ ಇಲಾಖಾ ಅಧಿಕಾರಿಗಳು ಕ್ರಮ ವಹಿಸಬೇಕು. ಆಯಾ ಇಲಾಖೆ ಅಧಿಕಾರಿಗಳು ಸಮಾವೇಶಕ್ಕೆ ಕರೆತರಲು ವಾಹನದ ವ್ಯವಸ್ಥೆ, ಮಾರ್ಗ, ಪ್ರತಿ 25 ರಿಂದ 30 ಫಲಾನುಭವಿಗಳಿಗೆ ಒಬ್ಬರಂತೆ ಮೇಲ್ವಿಚಾರಕರನ್ನು ನಿಯೋಜಿಸಿ,

ಫಲಾನುಭವಿಗಳನ್ನು ಸಮಾವೇಶದ ಸ್ಥಳಕ್ಕೆ ಕರೆತಂದು, ವಾಪಸ್ ಸುರಕ್ಷಿತವಾಗಿ ಹಿಂದಿರುಗುವವರೆಗಿನ ಯೋಜನೆಯನ್ನು ರೂಪಿಸಿಕೊಳ್ಳಬೇಕು. ಫಲಾನುಭವಿಗಳ ವಿವರ, ವಾಹನದ ವಿವರ, ಮಾರ್ಗ, ಮೇಲ್ವಿಚಾರಕರ ನಿಯೋಜನೆ ಕುರಿತ ಸಮಗ್ರ ವಿವರವನ್ನು ಒಂದು ದಿನದ ಒಳಗಾಗಿ ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಕಾರ್ಯಕ್ರಮ ಯಶಸ್ವಿಗೊಳಿಸಲು ಪ್ರಮುಖವಾಗಿ ಊಟ, ಕುಡಿಯುವ ನೀರು ಹಾಗೂ ವಾಹನದ ವ್ಯವಸ್ಥೆ ಯೋಜಿತ ರೀತಿಯಲ್ಲಿ ಆಗಬೇಕು, ಇದರಲ್ಲಿ ಯಾವುದೇ ಗೊಂದಲ ಇರಬಾರದು. ಫಲಾನುಭವಿಗಳಿಗೆ ಇಲಾಖಾವಾರು ಪ್ರತ್ಯೇಕವಾಗಿ ಬ್ಯಾಡ್ಜಸ್ ರೂಪಿಸಿ ವಿತರಿಸಬೇಕು ಎಂದರು ಸಮಾವೇಶ ಆವರಣದಲ್ಲಿ ಫಲಾನುಭವಿಗಳಿಗೆ ನೂಕುನುಗ್ಗಲು ಆಗದ ರೀತಿ ಊಟದ ಸಮರ್ಪಕ ವಿತರಣೆಗೆ ಹೆಚ್ಚಿನ ಕೌಂಟರ್‍ಗಳು ಇರಬೇಕು.

ಬೇಸಿಗೆ ಬಿಸಿಲು ಹೆಚ್ಚಾಗಿರುವುದರಿಂದ ಹೆಚ್ಚಿನ ಪ್ರಮಾಣದಲ್ಲಿ ಕುಡಿಯುವ ನೀರಿನ ಕೇಂದ್ರಗಳು ಇರಬೇಕು. ಊಟ, ನೀರಿನ ವಿತರಣೆಗೂ ಮುನ್ನ ಆಹಾರ ಗುಣಮಟ್ಟ ಪರಿಶೀಲನೆಯನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ನಡೆಸಿ, ದೃಢೀಕರಿಸಬೆಕು. ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರುವುದರಿಂದ, ಪೊಲೀಸ್ ಇಲಾಖೆಯು ಭದ್ರತಾ ವ್ಯವಸ್ಥೆಯನ್ನು ರೂಪಿಸಿಕೊಳ್ಳಬೇಕು, ಹಾಗೂ ಸಾವಿರಾರು ವಾಹನಗಳು ಬರುವುದರಿಂದ ಪಾರ್ಕಿಂಗ್‍ಗೆ ಸೂಕ್ತ ಸ್ಥಳಾವಕಾಶ ಮಾಡಿಕೊಂಡು, ಮಾರ್ಗಗಳ ನಿಯಂತ್ರಣ ವ್ಯವಸ್ಥೆ ಮಾಡಿಕೊಳ್ಳಬೇಕು. ವೇದಿಕೆಯಲ್ಲಿ ನಿಯಮಾನುಸಾರ ಶಿಷ್ಟಾಚಾರದ ಪಾಲನೆ ಆಗಬೇಕು, ಗಣ್ಯರನ್ನು ಸ್ವಾಗತಿಸುವುದು, ಗೌರವಿಸುವ ಕಾರ್ಯ ಅಚ್ಚುಕಟ್ಟಾಗಿ ಆಗಬೇಕು. ಸಮಾವೇಶಕ್ಕೆ ಶಾಲಾ ಕಾಲೇಜು ಮಕ್ಕಳನ್ನು ಕೂಡ ಕರೆತರಲಾಗುವುದರಿಂದ, ಮಕ್ಕಳ ಸುರಕ್ಷತೆ ಬಹುಮುಖ್ಯ ವಿಷಯವಾಗಿದ್ದು,

ಈ ಬಗ್ಗೆ ಡಿಡಿಪಿಐ ಅವರು ಹೆಚ್ಚಿನ ಗಮನ ನೀಡಬೇಕು. ಕಾರ್ಯಕ್ರಮಕ್ಕೆ ಜಿಲ್ಲೆಯ ವಿವಿಧೆಡೆಗಳಿಂದ ವೈವಿಧ್ಯಮಯ ಕಲಾತಂಡಗಳನ್ನು ಕರೆಸಿ, ಸಮಾರಂಭವನ್ನು ಹೆಚ್ಚು ಆಕರ್ಷಿತವಾಗಿಸಬೇಕು. ಸಮಾವೇಶ ಕುರಿತಂತೆ ಆಟೋಗಳಲ್ಲಿ ಧ್ವನಿವರ್ಧಕದ ಮೂಲಕ ವ್ಯಾಪಕ ಪ್ರಚಾರ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೂಚನೆ ನೀಡಿದರು. ಸಭೆಯಲ್ಲಿ ಜಿಲ್ಲಾಧಿಕಾರಿ ದಿವ್ಯಪ್ರಭು ಜಿ.ಆರ್.ಜೆ., ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಂ.ಎಸ್. ದಿವಾಕರ್, ಅಪರ ಜಿಲ್ಲಾಧಿಕಾರಿ ಟಿ. ಜವರೇಗೌಡ, ಉಪವಿಭಾಗಾಧಿಕಾರಿ ಚಂದ್ರಯ್ಯ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಸ್ವಾಮಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

Demo
Share. Facebook Twitter WhatsApp Pinterest LinkedIn Tumblr Telegram Email

Related Posts

ಕಾವೇರಿ ವಿಚಾರದಲ್ಲಿ ವಿಪಕ್ಷಗಳು ರೈತರನ್ನು ಎತ್ತಿಕಟ್ಟುವ ಕೆಲಸ ಮಾಡುತ್ತಿವೆ – ಚಲುವರಾಯಸ್ವಾಮಿ

September 24, 2023

ಸನಾತನ ಧರ್ಮ ಭಗವಂತನಿಂದ ನಿರ್ಮಾಣ, ಚಪ್ಪರ್ ಗಳಿಂದ ನಾಶ ಅಸಾಧ್ಯ – ಯತ್ನಾಳ್

September 24, 2023

 ದ್ವೇಷ ಭಾಷಣ ಆರೋಪ ವಿವಾರವಾಗಿ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್ ವಿರುದ್ಧ ಕೇಸ್

September 23, 2023

ಜೆಡಿಎಸ್ ಜೊತೆ ಸೇರಿ ಆವತ್ತು ನಾನು ಕೂಡ ಸೋತಿದ್ದೇ – ವೀರಪ್ಪ ಮೊಯಿಲಿ ವ್ಯಂಗ್ಯ

September 23, 2023

ಬರಗಾಲದ ವಿಚಾರದಲ್ಲಿ ಕಾಂಗ್ರೆಸ್​ ನಾಯಕರು ರಾಜಕಾರಣ ಮಾಡುತ್ತಿದ್ದಾರೆ – ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ

September 23, 2023

ಪ್ರಧಾನಿ ಮೋದಿ ಅವರನ್ನು ವಿರೋಧ ಮಾಡಲು ಕಾಂಗ್ರೆಸ್​ ಸರ್ಕಾರ ಕರ್ನಾಟಕದ ಜನರನ್ನು ಬಲಿ ಕೊಡ್ತಾ ಇದೆ – ಜಿ.ಟಿ. ದೇವೇಗೌಡ

September 23, 2023
Stay In Touch
  • Facebook
  • Instagram
  • YouTube
© 2023 Prajatvkannada . Designed by Prajatvkannada .
  • Home
  • ಬೆಂಗಳೂರು
  • ಜಿಲ್ಲೆ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ಲೈಫ್ ಸ್ಟೈಲ್
  • ಚಲನಚಿತ್ರ
  • ಕ್ರೀಡೆ
  • ಗ್ಯಾಲರಿ
  • ವಿಡಿಯೋ
  • ಜೋತಿಷ್ಯ

Type above and press Enter to search. Press Esc to cancel.