ರಾಜಧಾನಿ ಬೆಂಗಳೂರು ಸೇರಿ ರಾಜ್ಯದಲ್ಲಿ ಡೆಂಘೀ ಕೇಸ್ ಹೆಚ್ಚಳವಾಗಿದ್ದು, ರಾಜ್ಯದಲ್ಲಿ ಒಟ್ಟು 5,374 ಪ್ರಕರಣ ದಾಖಲಾಗಿದೆ
ಬೆಂಗಳೂರು, ಚಿಕ್ಕಮಗಳೂರು, ಮೈಸೂರು, ಹಾವೇರಿ, ಶಿವಮೊಗ್ಗ, ಚಿತ್ರದುರ್ಗ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರಕರಣಗಳು ಕಾಣಿಸಿಕೊಂಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರೋಬ್ಬರಿ 1230 ಪ್ರಕರಣಗಳು ವರದಿಯಾಗಿರೋ ಬಗ್ಗೆ ಮಾಹಿತಿ ನೀಡಿದರು.
ರಾಜ್ಯದಲ್ಲಿ ಡೆಂಘೀ ನಿಯಂತ್ರಣಕ್ಕೆ ಆಗತ್ಯ ಕ್ರಮ ಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಅಗತ್ಯ ಚಿಕಿತ್ಸೆ, ಚುಚ್ವು ಮದ್ದು, ಪ್ಲೇಟ್ ಲೆಟ್ಸ್ ಗಳ ಸಂಗ್ರಹ, ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು, ಔಷಧಿಗಳು ಲಭ್ಯವಿರುವುದನ್ನು ಖಾತರಿಪಡಿಸಿಕೊಳ್ಳಲೂ ಸೂಚಿಸಿದರು.
ಹುಬ್ಬಳ್ಳಿ-ಧಾರವಾಡದಲ್ಲೂ ಡೆಂಘಿ ಹಾವಳಿ ಜೋರಾಗಿದೆ. ಧಾರವಾಡ ನಗರದಲ್ಲಿ 64 ಜನರಲ್ಲಿ ಸೋಂಕು ಪತ್ತೆಯಾದ್ರೆ, ಹುಬ್ಬಳ್ಳಿಯಲ್ಲಿ 11 ಜನರಲ್ಲಿ ಸೋಂಕು ಪತ್ತೆಯಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದ್ರೆ ಈ ಬಾರಿ ಸೋಂಕು ಪೀಡಿತರ ಸಂಖ್ಯೆ ಹೆಚ್ಚಳ ಆಗ್ತಿದ್ಯಂತೆ. ಈ ಬಗ್ಗೆ ಮಾಹಿತಿ ನೀಡಿದ ಪಾಲಿಕೆ ಆಯುಕ್ತರು, ಅಗತ್ಯ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ. ಶಾಲಾ, ಕಾಲೇಜು, ವಿವಿಧ ಬಡಾವಣೆಗಳಲ್ಲಿ ಜಾಗೃತಿ ಮೂಡಿಸ್ತಿದೇವೆ ಎಂದರು.