ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಾಪಮಾನ ಹೆಚ್ಚಳದಿಂದ ರಾಜಧಾನಿ ಮಂದಿ ಅಕ್ಷರಶಃ ನಲುಗಿ ಹೋಗಿದ್ದಾರೆ.
ಅಲ್ಲದೇ ವೇತನ ಸಹಿತ ಅರ್ಧ ದಿನ ರಜೆಗೆ ಪೌರಕಾರ್ಮಿಕರು ಆಗ್ರಹಿಸಿದ್ದಾರೆ.
ಈ ಕುರಿತು ಅಖಿಲ ಭಾರತ ಕಾರ್ಮಿಕ ಸಂಘಗಳ ಒಕ್ಕೂಟವು ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಗಳಿಗೆ ಪತ್ರ ಬರೆದಿದೆ. ಪೌರಕಾರ್ಮಿಕರಿಗೆ ಶಾಖದ ಹೊಡೆತದಿಂದ ರಕ್ಷಿಸಿಕೊಳ್ಳಲು ಹೆಚ್ಚುವರಿ ವಿರಾಮದೊಂದಿಗೆ ಕುಡಿಯುವ ನೀರು, ಒಆರ್ಎಸ್ ಮತ್ತು ಮಜ್ಜಿಗೆ ನೀಡಬೇಕು ಎಂದು ಪತ್ರದಲ್ಲಿ ಆಗ್ರಹಿಸಲಾಗಿದೆ.
ಶುದ್ಧ ನೀರು ಮತ್ತು ನೈರ್ಮಲ್ಯದ ಶೌಚಾಲಯಗಳಿಂದ ವಂಚಿತರಾಗಿರುವ ಪೌರಕಾರ್ಮಿಕರು ಶಾಖ-ಸಂಬಂಧಿತ ಕಾಯಿಲೆಗಳಿಗೆ ತುತ್ತಾಗುವ ಹೆಚ್ಚಿನ ಅಪಾಯವನ್ನು ಹೊಂದಿದ್ದಾರೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಕಳೆದ ಕೆಲವು ವಾರಗಳಿಂದ ತೀವ್ರತರವಾದ ಶಾಖದಲ್ಲಿ ಕೆಲಸ ಮಾಡುತ್ತಿದ್ದೇವೆ. ಇದರಿಂದ ಹೆಚ್ಚು ದಣಿವಾಗುತ್ತಿದೆ. ಕೆಲವರಿಗೆ ಕೆಲಸದ ವೇಳೆ ಆಯಾಸ, ತಲೆತಿರುಗುವಿಕೆ ಸಮಸ್ಯೆ ಕಾಣಿಸಿಕೊಂಡಿದೆ.