ಅಹಮದಾಬಾದ್: ವಿಶ್ವಕಪ್ (World Cup) ಟೂರ್ನಿಯ ರೋಚಕ ಇಂಡೋ-ಪಾಕ್ (Ind vs Pak) ಸಮರಕ್ಕೆ ಕ್ಷಣಗಣನೆ ಬಾಕಿಯಿದೆ. ಮಧ್ಯಾಹ್ನ 2 ಗಂಟೆಗೆ ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ (Narendra Modi Stadium) ಆರಂಭವಾಗಿದೆ. ಈ ಪಂದ್ಯ ನೋಡಲು ಮೈದಾನಕ್ಕೆ ಜನಸಾಗರವೇ ಹರಿದು ಬಂದಿದೆ. ಎಲ್ಲ ಟಿಕೆಟ್ಗಳು ಕೂಡ ಸೋಲ್ಡ್ ಔಟ್ ಆಗಿದ್ದು, ಟಿಕೆಟ್ ಸಿಗದ ಕೆಲವರು ಸ್ಟೇಡಿಯಂನ ಹೊರ ಭಾಗದಲ್ಲಿ ಭಾರತ ತಂಡದ ಜೆರ್ಸಿಯನ್ನು ಹಾಕಿ ಸಂಭ್ರಮಾಚರಣೆ ಮಾಡುವ ಮೂಲಕ ತಂಡಕ್ಕೆ ಬೆಂಬಲ ಸೂಚಿಸುತ್ತಿದ್ದಾರೆ.
ಮಧ್ಯಾಹ್ನ 12.30ರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿದ್ದು, ಬಾಲಿವುಡ್ ಗಾಯಕರಾದ ಶಂಕರ್ ಮಹಾದೇವನ್, ಸುಖ್ವಿಂದರ್ ಸಿಂಗ್, ಅರ್ಜಿತ್ ಸಿಂಗ್ ಸಂಗೀತ ಸುಧೆ ಹರಿಸಲಿದ್ದಾರೆ. ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಸೇರಿ ಹಲವು ಮಾಜಿ ಆಟಗಾರರು ಈ ಪಂದ್ಯ ವೀಕ್ಷಣೆಗೆ ಅಹಮದಾಬಾದ್ಗೆ ಆಗಮಿಸಿದ್ದಾರೆ. ಪ್ರತಿಬಾರಿ ಭಾರತದ ಗೆಲುವಿಗಾಗಿ ದೇಶದ ಹಲವು ಕಡೆಗಳಲ್ಲಿ ಅಭಿಮಾನಿಗಳು ಪೂಜೆ ಮತ್ತು ಪ್ರಾರ್ಥನೆ ನಡೆಸಿದ್ದಾರೆ. ಪಂದ್ಯಕ್ಕೆ ಭಾರೀ ಕಟ್ಟೆಚ್ಚರ ವಹಿಸಿದ್ದು, ಗುಜರಾತ್ ಪೊಲೀಸ್, ಎನ್ಎಸ್ಜಿ, ಆರ್ಎಎಫ್, ಗೃಹರಕ್ಷಣಾ ಪಡೆ ಸಹಿತ ಕ್ರೀಡಾಂಗಣದ ಸುತ್ತ ವಿವಿಧ ಭದ್ರತಾ ಏಜೆನ್ಸಿಗಳಿಂದ ಒಟ್ಟು 11 ಸಾವಿರ ರಕ್ಷಣಾ ಸಿಬ್ಬಂದಿಯನ್ನು ಬಿಗಿಭದ್ರತೆಗಾಗಿ ನಿಯೋಜಿಸಲಾಗಿದೆ.