ಚಂದ್ರಯಾನ -3 ಯೋಜನೆಯ ಲ್ಯಾಂಡರ್ ಶಶಿಯ ಸ್ಪರ್ಶಕ್ಕೆ ರೆಡಿಯಾಗಿದೆ. ಇಂದು ಸಂಜೆ 6.04ಕ್ಕೆ ಚಂದ್ರನ ದಕ್ಷಿಣ ಧ್ರುವ ಮೇಲ್ಮೈ ಮೇಲೆ ಲ್ಯಾಂಡರ್ ಲ್ಯಾಂಡ್ ಆಗಲು ಸಮಯ ನಿಗದಿ ಮಾಡಲಾಗಿದೆ.
ಆದ್ರೆ ಸಂಜೆ 5.45ಕ್ಕೆ ಲ್ಯಾಂಡರ್ ಇಳಿಯುವ ಪ್ರಕ್ರಿಯೆ ಆರಂಭವಾಗಲಿದೆ. ಚಂದ್ರನ ದಕ್ಷಿಣ ಧ್ರುವದ ಮೇಲೆ ಸೂರ್ಯ ರಶ್ಮಿ ಬಿದ್ದ ಬಳಿಕವಷ್ಟೇ ಲ್ಯಾಂಡಿಂಗ್ ಸಾಧ್ಯವಾಗಲಿದೆ. ಬರೋಬ್ಬರಿ 45 ದಿನಗಳ ಪ್ರಯಾಣದ ಮೂಲಕ ವಿಕ್ರಮ್ ಲ್ಯಾಂಡರ್ ಮೂರು ಲಕ್ಷ 84 ಸಾವಿರ ಕಿಲೋ ಮೀಟರ್ ದೂರ ಇರುವ ಚಂದ್ರನ ಸಮೀಪಕ್ಕೆ ತಲುಪಿದೆ.
ಇನ್ನು ಚಂದ್ರನ ಕಕ್ಷೆಗೆ ಸೇರಿದ ಬಳಿಕ ನೌಕೆ ಈವರೆಗೂ ಐದು ಬಾರಿ ಪ್ರದಕ್ಷಿಣೆ ಹಾಕಿದೆ. ಇದೀಗ ಲ್ಯಾಂಡರ್ ನಿಧಾನಕ್ಕೆ ಚಂದ್ರನ ಮೇಲ್ಮೈಯಲ್ಲಿ ಇಳಿಯಲು ಪ್ರಾರಂಭಿಸುತ್ತಿದ್ದು, ಲ್ಯಾಂಡರ್ನಿಂದ ಪ್ರಗ್ಯಾನ್ ರೋವರ್ ಹೊರಬರಲು ಕ್ಷಣಗಣನೆ ಶುರುವಾಗಿದೆ.