ನವದೆಹಲಿ:- ಕ್ಯಾನ್ಸರ್ ಕುರಿತು ದೊಡ್ಡ ಮಟ್ಟದ ಜಾಗೃತಿಗಳು ಭಾರತದಲ್ಲಿ ನಡೆಯುತ್ತಿವೆ. ಭಾರತದಲ್ಲಿ ಕ್ಯಾನ್ಸರ್ಗಳ ಪತ್ತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಇದು ಎಷ್ಟರ ಮಟ್ಟಿಗೆ ಎಂದರೆ ಕ್ಯಾನ್ಸರ್ ಪತ್ತೆಯಾಗುವ ಪ್ರಮಾಣ ಅಪಾಯದ ಮಟ್ಟ ಮೀರಿದೆ. ಇತ್ತೀಚಿನ ವರದಿಯೊಂದರ ಪ್ರಕಾರ ಭಾರತ ಕ್ಯಾನ್ಸರ್ನ ರಾಜಧಾನಿಯಾಗಿ ಪರಿವರ್ತನೆಗೊಂಡಿದೆ.
2024 ರ ವಿಶ್ವ ಆರೋಗ್ಯ ದಿನದಂದು ಬಿಡುಗಡೆಯಾದ ಅಪೊಲೊ ಆಸ್ಪತ್ರೆಗಳ ‘ಹೆಲ್ತ್ ಆಫ್ ನೇಷನ್’ ವರದಿಯ 4 ನೇ ಆವೃತ್ತಿಯು ಭಾರತವನ್ನು “ವಿಶ್ವದ ಕ್ಯಾನ್ಸರ್ ರಾಜಧಾನಿ” ಎಂದು ಕರೆದಿದೆ.
ವರದಿಯ ಪ್ರಕಾರ, ಮೂವರು ಭಾರತೀಯರಲ್ಲಿ ಒಬ್ಬರು ಪೂರ್ವ ಮಧುಮೇಹದಿಂದ ಬಳಲುತ್ತಿದ್ದಾರೆ, ಮೂವರಲ್ಲಿ ಇಬ್ಬರು ಪೂರ್ವ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. 10ರಲ್ಲಿ ಒಬ್ಬರು ಖಿನ್ನತೆಗೆ ಒಳಗಾಗಿದ್ದಾರೆ. ಕ್ಯಾನ್ಸರ್, ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯರಕ್ತನಾಳದ ಕಾಯಿಲೆಗಳು ಮತ್ತು ಮಾನಸಿಕ ಆರೋಗ್ಯ ಅಸ್ವಸ್ಥತೆಗಳು ನಿರ್ಣಾಯಕ ಮಟ್ಟ ತಲುಪಿದೆ. ಇದು ರಾಷ್ಟ್ರದ ಆರೋಗ್ಯದ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುತ್ತದೆ.
ಏರುತ್ತಿದೆ ಕ್ಯಾನ್ಸರ್ ಪ್ರಮಾಣ
ಕ್ಯಾನ್ಸರ್ ಪ್ರಕರಣಗಳ ಉಲ್ಬಣವು ಭಾರತದಲ್ಲಿ ಮಿತಿಮೀರಿದೆ ಮತ್ತು “ವಿಶ್ವದ ಕ್ಯಾನ್ಸರ್ ರಾಜಧಾನಿ” ಎಂಬ ಬಿರುದು ಬರುವಂತೆ ಮಾಡಿದೆ ಎಂಬುದೇ ಆತಂಕಕಾರಿ. ಮಹಿಳೆಯರಲ್ಲಿ ಸ್ತನ ಕ್ಯಾನ್ಸರ್, ಗರ್ಭಕಂಠದ ಕ್ಯಾನ್ಸರ್ ಅಂಡಾಶಯದ ಕ್ಯಾನ್ಸರ್ ಭಾರತದಲ್ಲಿ ಪತ್ತೆಯಾಗುವ ಸಾಮಾನ್ಯ ಕ್ಯಾನ್ಸರ್. ಪುರುಷರಲ್ಲಿ, ಶ್ವಾಸಕೋಶದ ಕ್ಯಾನ್ಸರ್, ಬಾಯಿಯ ಕ್ಯಾನ್ಸರ್ ಮತ್ತು ಪ್ರಾಸ್ಟೇಟ್ ಕ್ಯಾನ್ಸರ್ ಪ್ರಕರಣಗಳು ಹೆಚ್ಚಾಗಿವೆ.
ಇತರ ದೇಶಗಳಿಗೆ ಹೋಲಿಸಿದರೆ, ಭಾರತದಲ್ಲಿ ಕ್ಯಾನ್ಸರ್ ವಕ್ಕರಿಸಿಕೊಳ್ಳುತ್ತದೆ. ಸ್ತನ ಕ್ಯಾನ್ಸರ್ ರೋಗನಿರ್ಣಯಕ್ಕೆ ಸರಾಸರಿ 52 ವರ್ಷ, ಶ್ವಾಸಕೋಶದ ಕ್ಯಾನ್ಸರ್ಗೆ ಸರಾಸರಿ 54 ವರ್ಷವಾಗಿದೆ. ಆದರೆ, ಯುಎಸ್, ಯುಕೆ ಮತ್ತು ಚೀನಾದಲ್ಲಿ ರೋಗನಿರ್ಣಯದ ವಯಸ್ಸು 60 ಮತ್ತು 70 ವರ್ಸದ ಆಸುಪಾಸಿನಲ್ಲಿದೆ. ವರದಿಯ ಪ್ರಕಾರ, ಕ್ಯಾನ್ಸರ್ ವಿರುದ್ಧದ ಭಾರತದ ಹೋರಾಟದಲ್ಲಿ ಗಮನಾರ್ಹ ಅಡಚಣೆಯೆಂದರೆ ಅದರ ಅಸಮರ್ಪಕ ತಪಾಸಣೆ. ಇದು ಜಾಗತಿಕ ಮಾನದಂಡಗಳಿಗಿಂತ ಬಹಳ ಕಡಿಮೆಯಾಗಿದೆ.
ತಡೆ ಹೇಗೆ?
ತಂಬಾಕು ಬಳಸದಿರುವುದು
ಆಲ್ಕೋಹಾಲ್ ಸೇವನೆ ಮಾಡದಿರುವುದ ಅಥವಾ ಕಡಿಮೆ ಮಾಡುವುದು
ಲಸಿಕೆಯನ್ನು ಶಿಫಾರಸು ಮಾಡಿದ ಗುಂಪಿಗೆ ಸೇರಿದವರಾಗಿದ್ದರೆ ಎಚ್ ಪಿವಿ ಮತ್ತು ಹೆಪಟೈಟಿಸ್ ಬಿ ವಿರುದ್ಧ ಲಸಿಕೆ ಪಡೆಯುವುದು
ವಿಕಿರಣಕ್ಕೆ ಒಡ್ಡಿಕೊಳ್ಳುವುದನ್ನು ತಪ್ಪಿಸುವುದು (ಇದು ಪ್ರಾಥಮಿಕವಾಗಿ ಸೂರ್ಯನ ಬೆಳಕು ಮತ್ತು ಕೃತಕ ಟ್ಯಾನಿಂಗ್ ಸಾಧನಗಳಿಗೆ ಒಡ್ಡಿಕೊಳ್ಳುವುದರಿಂದ ಉಂಟಾಗುತ್ತದೆ)
ರೇಡಾನ್ (ಯುರೇನಿಯಂನ ನೈಸರ್ಗಿಕ ಕೊಳೆಯುವಿಕೆಯಿಂದ ಉತ್ಪತ್ತಿಯಾಗುವ ವಿಕಿರಣಶೀಲ ಅನಿಲ, ಇದು ಕಟ್ಟಡಗಳಲ್ಲಿ – ಮನೆಗಳು, ಶಾಲೆಗಳು ಮತ್ತು ಕೆಲಸದ ಸ್ಥಳಗಳಲ್ಲಿ ಸಂಗ್ರಹವಾಗಬಹುದು)