ಸೆಪ್ಟಂಬರ್ 22 ರಂದು ಉಭಯ ತಂಡಗಳ ನಡುವಣ ಏಕದಿನ ಸರಣಿ ಆರಂಭವಾಗಲಿದೆ. ಅಕ್ಟೋಬರ್ 5 ರಂದು ಆರಂಭವಾಗುವ 2023ರ ಏಕದಿನ ವಿಶ್ವಕಪ್ ಟೂರ್ನಿಗೆ ತಯಾರಿ ನಡೆಸಲು ಈ ಸರಣಿ ಈ ಎರಡೂ ತಂಡಗಳಿಗೆ ಕೊನೆಯ ಅವಕಾಶವಾಗಿದೆ. ಭಾರತದಲ್ಲಿಯೇ 50 ಓವರ್ಗಳ ವಿಶ್ವಕಪ್ ನಡೆಯುವ ಕಾರಣ ಆಸ್ಟ್ರೇಲಿಯಾ ತಂಡಕ್ಕೆ ಈ ಸರಣಿ ಅತ್ಯಂತ ಮಹತ್ವವನ್ನು ಪಡೆದುಕೊಂಡಿದೆ
ಈ ಸರಣಿಯ ನಿಮಿತ್ತ ಅಜಿತ್ ಅಗರ್ಕರ್ ಸಾರಥ್ಯದ ಬಿಸಿಸಿಐ (BCCI) ಅಯ್ಕೆ ಸಮಿತಿಯು ಭಾರತ ತಂಡವನ್ನು ಸೋಮವಾರ ಪ್ರಕಟಿಸಿದೆ. ಹಿರಿಯ ಆಫ್ ಸ್ಪಿನ್ನರ್ ರವಿಚಂದ್ರನ್ ಅಶ್ವಿನ್ಗೆ ಅವಕಾಶ ನೀಡಿದೆ. ವಿಶೇಷವೆಂದರೆ ಇದರಲ್ಲಿ ಮೊದಲೆರಡು ಪಂದ್ಯಗಳಿಗೆ ಕೆ.ಎಲ್ ರಾಹುಲ್ಗೆ (KL Rahul) ನಾಯಕತ್ವ ನೀಡಲಾಗಿದ್ದು, ರವೀಂದ್ರ ಜಡೇಜಾ (Ravindra Jadeja) ಉಪನಾಯಕನಾಗಿ ಕಣಕ್ಕಿಳಿಯಲಿದ್ದಾರೆ
1 ಮತ್ತು 2ನೇ ಏಕದಿನ ಪಂದ್ಯಕ್ಕೆ ಭಾರತ ತಂಡ:
ಕೆ.ಎಲ್ ರಾಹುಲ್ (ನಾಯಕ ಹಾಗೂ ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ಋತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಇಶಾನ್ ಕಿಶನ್ (ವಿಕೆಟ್ ಕೀಪರ್), ಶಾರ್ದುಲ್ ಠಾಕೂರ್, ವಾಷಿಂಗ್ಟನ್ ಸುಂದರ್, ಆರ್.ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಪ್ರಸಿಧ್ ಕೃಷ್ಣ
3ನೇ ಒಡಿಐಗೆ ಭಾರತ ತಂಡ:
ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, (ಉಪನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ, ಶಾರ್ದುಲ್ ಠಾಕೂರ್, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಆರ್. ಅಶ್ವಿನ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್.
ಏಕದಿನ ಸರಣಿಗೆ ಆಸ್ಟ್ರೇಲಿಯಾ ತಂಡ:
ಪ್ಯಾಟ್ ಕಮ್ಮಿನ್ಸ್ (ನಾಯಕ), ಶೇನ್ ಅಬಾಟ್, ಅಲೆಕ್ಸ್ ಕ್ಯಾರಿ, ನಾಥನ್ ಎಲ್ಲಿಸ್, ಕ್ಯಾಮರೂನ್ ಗ್ರೀನ್, ಜಾಶ್ ಹೇಝಲ್ವುಡ್, ಜಾಶ್ ಇಂಗ್ಲಿಸ್, ಸ್ಪೆನ್ಸರ್ ಜಾನ್ಸನ್, ಮಾರ್ನಸ್ ಲಾಬುಶೇನ್, ಮಿಚೆಲ್ ಮಾರ್ಷ್, ಗ್ಲೇನ್ ಮ್ಯಾಕ್ಸ್ವೆಲ್, ತನ್ವೀರ್ ಸಂಘ, ಮ್ಯಾಟ್ ಶಾರ್ಟ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಡೇವಿಡ್ ವಾರ್ನರ್ ಹಾಗೂ ಆಡಮ್ ಝಂಪಾ