ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ಮೊದಲ ಎರಡು ಪಂದ್ಯಗಳು ಮುಕ್ತಾಯವಾಗಿದೆ. ಈ ಎರಡು ಪಂದ್ಯದಲ್ಲಿಯೂ ಟೀಮ್ ಇಂಡಿಯಾ ಗೆಲುವು ಸಾಧಿಸಿರುವ ಕಾರಣ ಸರಣಿಯಲ್ಲಿ ಟೀಮ್ ಇಂಡಿಯಾ 2-0 ಅಂತರದಿಂದ ಮುನ್ನಡೆ ಸಾಧಿಸಿದ್ದು ಆಸ್ಟ್ರೇಲಿಯಾದ ಸರಣಿ ಗೆಲ್ಲುವ ಕನಸು ಮತ್ತೊಮ್ಮೆ ಭಗ್ನವಾಗಿದೆ.
ಇದೀಗ ಮೂರನೇ ಟೆಸ್ಟ್ ಪಂದ್ಯಕ್ಕೆ ಎರಡು ತಂಡಗಳು ಕೂಡ ಸಿದ್ಧತೆ ನಡೆಸುತ್ತಿದೆ. ಮೊದಲ ಎರಡು ಪಂದ್ಯಗಳ ಮುಕ್ತಾಯದ ಬಳಿಕ ಉತ್ತಮ ವಿರಾಮದ ಬಳಿಕ ಮತ್ತೆ ಸರಣಿ ಮುಂದುವರಿಯಲಿದೆ.
3ನೇ ಪಂದ್ಯದ ದಿನಾಂಕ ಹಾಗೂ ಸಮಯ:
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳ ನಡುವಿನ ಟೆಸ್ಟ್ ಸರಣಿಯ ಮೂರನೇ ಪಂದ್ಯ ಮಾರ್ಚ್ 1ರಿಂದ ಮಾರ್ಚ್ 5ರ ವರೆಗೆ ನಡೆಯಲಿದೆ. ಭಾರತೀಯ ಕಾಲಮಾನ ಬೆಳಿಗ್ಗೆ 9:30ಕ್ಕೆ ಪಂದ್ಯ ಆರಂಭವಾಗಲಿದೆ.
ನೇರಪ್ರಸಾರದ ಮಾಹಿತಿ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಟೆಸ್ಟ್ ಸರಣಿಯ ನೇರಪ್ರಸಾರ ಸ್ಟಾರ್‌ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಪ್ರಸಾರವಾಗಲಿದೆ. ಡಿಸ್ನಿ+ಹಾಟ್‌ಸ್ಟಾರ್‌ನಲ್ಲಿಯೂ ನೇರಪ್ರಸಾರವಿರಲಿದ್ದು ಜಿಯೋ ಚಂದಾದಾರರು ಕೂಡ ಜಿಯೋ ಟಿವಿಯಲ್ಲಿ ಪಂದ್ಯ ವೀಕ್ಷಿಸಬಹುದು.
3ನೇ ಟೆಸ್ಟ್ ಪಂದ್ಯ ನಡೆಯುವ ತಾಣ
ಭಾರತ ಹಾಗೂ ಆಸ್ಟ್ರೇಲಿಯಾ ತಂಡಗಳು ಬಾರ್ಡರ್ ಗವಾಸ್ಕರ್ ಟ್ರೋಫಿಯ ಮೂರನೇ ಪಂದ್ಯವನ್ನು ಇಂದೋರ್‌ನ ಹೋಲ್ಕರ್ ಕ್ರೀಡಾಂಗಣದಲ್ಲಿ ಆಡಲಿದೆ. ಈ ಸರಣಿಯು ಮೂರನೇ ಪಂದ್ಯ ಮೊದಲಿಗೆ ಧರ್ಮಶಾಲಾದ ಹೆಚ್‌ಪಿಸಿಎ ಕ್ರೀಡಾಂಗಣದಲ್ಲಿ ಆಯೋಜನೆಗೆ ನಿರ್ಧರಿಸಲಾಗಿತ್ತು. ಆದರೆ ಕ್ರೀಡಾಂಗಣ ಸಂಪೂರ್ಣವಾಗಿ ಸಿದ್ಧವಾಗಿರದ ಕಾರಣದಿಂದಾಗಿ ಈ ಪಂದ್ಯವನ್ನು ಇಂದೋರ್‌ಗೆ ಸ್ಥಳಾಂತರಿಸಲಾಗಿದೆ.
ಇತ್ತಂಡಗಳ ಸ್ಕ್ವಾಡ್ ಹೀಗಿದೆ
ಭಾರತದ ಟೀಂ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್, ಶುಬ್ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಶ್ರೀಕರ್ ಭರತ್, ಇಶಾನ್ ಕಿಶನ್, ರವಿಚಂದ್ರನ್ ಅಶ್ವಿನ್, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನದ್ಕತ್, ಸೂರ್ಯಕುಮಾರ್ ಯಾದವ್
ಆಸ್ಟ್ರೇಲಿಯಾ ಟೀಂ: ಪ್ಯಾಟ್ ಕಮ್ಮಿನ್ಸ್ (ನಾಯಕ), ಆಶ್ಟನ್ ಅಗರ್, ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮೆರೂನ್ ಗ್ರೀನ್, ಪೀಟರ್ ಹ್ಯಾಂಡ್ಸ್‌ಕಾಂಬ್, ಟ್ರಾವಿಸ್ ಹೆಡ್, ಉಸ್ಮಾನ್ ಖವಾಜಾ, ಮಾರ್ನಸ್ ಲ್ಯಾಬುಶೈನ್, ನಾಥನ್ ಲಿಯಾನ್, ಲ್ಯಾನ್ಸ್ ಮೋರಿಸ್, ಟಾಡ್ ಮರ್ಫಿ, ಮ್ಯಾಟ್ ರೆನ್ಶಾ, ಸ್ಟೀವನ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಮ್ಯಾಥ್ಯೂ ಕುನ್ನೇಮನ್