ಬೆಂಗಳೂರು: ಇಂದು ಭಾರತ ನ್ಯೂಜಿಲೆಂಡ್ ನಡುವೆ ಸೆಮಿಫೈನಲ್ ಪಂದ್ಯ. ಹೀಗಾಗಿ ಭಾರತದ ಗೆಲುವಿಗಾಗಿ ಅಭಿಮಾನಿಗಳು ಪ್ರಾರ್ಥನೆ ಮಾಡಿದ್ದಾರೆ. ಮೈಸೂರಿನ ಅಗ್ರಹಾರ ಬಡಾವಣೆಯ 101 ಗಣಪತಿ ದೇಗುಲದಲ್ಲಿ ಭಾರತೀಯ ಆಟಗಾರರ ಭಾವಚಿತ್ರ ಹಿಡಿದು ಪ್ರಾರ್ಥನೆ ಮಾಡಿ ಭಾರತದ ಪರ ಘೋಷಣೆ ಕೂಗಿ ಶುಭ ಹಾರೈಸಿದ್ದಾರೆ.
ಏಕದಿನ ವಿಶ್ವಕಪ್, ಟಿ20 ವಿಶ್ವಕಪ್, ಚಾಂಪಿಯನ್ಸ್ ಟ್ರೋಪಿ ಹಾಗೂ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸೇರಿದಂತೆ ಐಸಿಸಿಯ ಟೂರ್ನಿಗಳಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು 15 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಟೀಂ ಇಂಡಿಯಾ 4 ಪಂದ್ಯಗಳನ್ನು ಮಾತ್ರ ಗೆದ್ದುಕೊಂಡಿದೆ. ಆದರೆ ಕಿವೀಸ್ ಪಡೆ 10 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಒಂದು ಪಂದ್ಯ ಮಳೆಯಿಂದ ರದ್ದಾಗಿದೆ.
ಅಂತಾರಾಷ್ಟ್ರೀಯ ಏಕದಿನ ಕ್ರಿಕೆಟ್ನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು 117 ಬಾರಿ ಮುಖಾಮುಖಿಯಾಗಿದ್ದು, ಇದರಲ್ಲಿ 59 ಪಂದ್ಯಗಳಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿದೆ. ಕಿವೀಸ್ 50 ಪಂದ್ಯಗಳಲ್ಲಿ ಜಯ ಕಂಡಿದೆ. 1 ಪಂದ್ಯ ಟೈ ಆಗಿದ್ದರೆ, 7 ಪಂದ್ಯಗಳಲ್ಲಿ ಯಾವುದೇ ಫಲಿತಾಂಶ ಬಂದಿಲ್ಲ. ಏಕದಿನ ಕ್ರಿಕೆಟ್ ಅಂಕಿ ಅಂಶಗಳನ್ನು ನೋಡಿದಾಗ ಭಾರತವೇ ಮೇಲುಗೈ ಸಾಧಿಸಿದೆ.
ಭಾರತದಲ್ಲಿ ಟೀಂ ಇಂಡಿಯಾ ಮತ್ತು ನ್ಯೂಜಿಲೆಂಡ್ ತಂಡಗಳು 39 ಏಕದಿನ ಪಂದ್ಯಗಳನ್ನು ಆಡಿವೆ. ಈ ಪಾಕಿ ಭಾರತ 30 ಪಂದ್ಯಗಳಲ್ಲಿ ಜಯಭೇರಿ ಬಾರಿಸಿದೆ. ನ್ಯೂಜಿಲೆಂಡ್ ಕೇವಲ 8ರಲ್ಲಿ ಮಾತ್ರ ಗೆಲುವು ಕಂಡಿದೆ. ಒಂದು ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಭಾರತದಲ್ಲಿ ನಡೆದ ಏಕದಿನ ವಿಶ್ವಕಪ್ನಲ್ಲಿ ಉಭಯ ತಂಡಗಳು ನಾಲ್ಕು ಬಾರಿ ಮುಖಾಮುಖಾಯಾಗಿವೆ. ಭಾರತ 1987ರ ವಿಶ್ವಕಪ್ನಲ್ಲಿ ಎರಡು ಪಂದ್ಯಗಳನ್ನು ಮತ್ತು 2023ರ ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ 1 ಪಂದ್ಯವನ್ನು ಗೆದ್ದುಕೊಂಡಿದೆ. ಆದರೆ 2015ರ ವಿಶ್ವಕಪ್ನಲ್ಲಿ ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾ ಸೋಲು ಕಂಡಿತ್ತು.