ಇಂಡಿಯಾ ಚಾಂಪಿಯನ್ಸ್ ಮತ್ತು ಪಾಕಿಸ್ತಾನ್ ಚಾಂಪಿಯನ್ಸ್ ತಂಡಗಳು ಮುಖಾಮುಖಿಯಾಗಲಿದೆ. ಮೊದಲ ಸೆಮಿಫೈನಲ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಚಾಂಪಿಯನ್ಸ್ ತಂಡವನ್ನು 20 ರನ್ಗಳಿಂದ ಮಣಿಸಿ ಪಾಕಿಸ್ತಾನ್ ಚಾಂಪಿಯನ್ಸ್ ಫೈನಲ್ಗೆ ಪ್ರವೇಶಿಸಿದರೆ, ಆಸ್ಟ್ರೇಲಿಯಾ ಚಾಂಪಿಯನ್ಸ್ ತಂಡವನ್ನು 86 ರನ್ಗಳಿಂದ ಬಗ್ಗು ಬಡಿದು ಇಂಡಿಯಾ ಚಾಂಪಿಯನ್ಸ್ ಫೈನಲ್ಗೆ ಲಗ್ಗೆಯಿಟ್ಟಿದೆ.
ಅದರಂತೆ ಜು.13 ರಂದು ಬರ್ಮಿಂಗ್ಹ್ಯಾಮ್ನ ಎಡ್ಜ್ಬಾಸ್ಟನ್ ಸ್ಟೇಡಿಯಂನಲ್ಲಿ ನಡೆಯಲಿರುವ ಅಂತಿಮ ಹಣಾಹಣಿ ನಡೆಯಲಿದೆ
ಇಂದು ಇಂಡಿಯಾ ಚಾಂಪಿಯನ್ಸ್ ಮತ್ತು ಪಾಕಿಸ್ತಾನ್ ಚಾಂಪಿಯನ್ಸ್ ನಡುವಣ ಪಂದ್ಯವು ಭಾರತೀಯ ಕಾಲಮಾನ ರಾತ್ರಿ 9 ಗಂಟೆಯಿಂದ ಶುರುವಾಗಲಿದೆ.
ಇಂಡಿಯಾ ಚಾಂಪಿಯನ್ಸ್ ಮತ್ತು ಪಾಕಿಸ್ತಾನ್ ಚಾಂಪಿಯನ್ಸ್ ನಡುವಿನ ವರ್ಲ್ಡ್ ಚಾಂಪಿಯನ್ಶಿಪ್ ಆಫ್ ಲೆಜೆಂಡ್ಸ್ನ ಫೈನಲ್ ಪಂದ್ಯವನ್ನು ಫ್ಯಾನ್ಕೋಡ್ ಅಪ್ಲಿಕೇಶನ್ ಮತ್ತು ವೆಬ್ಸೈಟ್ನಲ್ಲಿ ವೀಕ್ಷಿಸಬಹುದು.
ಇಂಡಿಯಾ ಚಾಂಪಿಯನ್ಸ್ ತಂಡ: ರಾಬಿನ್ ಉತ್ತಪ್ಪ (ವಿಕೆಟ್ ಕೀಪರ್), ಅಂಬಾಟಿ ರಾಯುಡು, ಸುರೇಶ್ ರೈನಾ, ಯುವರಾಜ್ ಸಿಂಗ್ (ನಾಯಕ), ಯೂಸುಫ್ ಪಠಾಣ್, ಇರ್ಫಾನ್ ಪಠಾಣ್, ಗುರುಕೀರತ್ ಸಿಂಗ್ ಮಾನ್, ಪವನ್ ನೇಗಿ, ವಿನಯ್ ಕುಮಾರ್, ಹರ್ಭಜನ್ ಸಿಂಗ್, ಧವಳ್ ಕುಲಕರ್ಣಿ, ರಾಹುಲ್ ಶುಕ್ಲಾ, ಆರ್ ಪಿ ಸಿಂಗ್, ನಮನ್ ಓಜಾ, ಸೌರಭ್ ತಿವಾರಿ, ಅನುರೀತ್ ಸಿಂಗ್, ರಾಹುಲ್ ಶರ್ಮಾ
ಪಾಕಿಸ್ತಾನ್ ಚಾಂಪಿಯನ್ಸ್ ತಂಡ: ಕಮ್ರಾನ್ ಅಕ್ಮಲ್ (ವಿಕೆಟ್ ಕೀಪರ್), ಶರ್ಜೀಲ್ ಖಾನ್, ಸೊಹೈಬ್ ಮಕ್ಸೂದ್, ಶೋಯೆಬ್ ಮಲಿಕ್, ಯೂನಿಸ್ ಖಾನ್ (ನಾಯಕ), ಶಾಹಿದ್ ಅಫ್ರಿದಿ, ಮಿಸ್ಬಾ-ಉಲ್-ಹಕ್, ಅಮರ್ ಯಾಮಿನ್, ಸೊಹೈಲ್ ತನ್ವೀರ್, ವಹಾಬ್ ರಿಯಾಜ್, ಸೊಹೈಲ್ ಖಾನ್, ಅಬ್ದುಲ್ ರಜಾಕ್, ತೌಫೀಕ್ ಉಮರ್, ಮೊಹಮ್ಮದ್ ಹಫೀಜ್, ಯಾಸಿರ್ ಅರಾಫತ್, ಸಯೀದ್ ಅಜ್ಮಲ್, ಉಮರ್ ಅಕ್ಮಲ್, ತನ್ವಿರ್ ಅಹ್ಮದ್.