ಟೋಕಿಯೊ: ಭಾರತವು ಪಾಕಿಸ್ತಾನದೊಂದಿಗೆ (Pakistan) ಸಾಮಾನ್ಯ ಮತ್ತು ನೆರೆಹೊರೆಯ ಸಂಬಂಧವನ್ನು ಬಯಸುತ್ತದೆ ಆದರೆ ಭಯೋತ್ಪಾದನೆಯಿಂದ ಮುಕ್ತವಾದ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವುದು ಮತ್ತು ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಇಸ್ಲಾಮಾಬಾದ್ನ ಜವಾಬ್ದಾರಿಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ನಿಕ್ಕಿ ಏಷ್ಯಾಕ್ಕೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ. ಭಾರತವು ಪಾಕಿಸ್ತಾನದೊಂದಿಗೆ ಸಾಮಾನ್ಯ ದ್ವಿಪಕ್ಷೀಯ ಬಾಂಧವ್ಯವನ್ನು ಬಯಸುತ್ತದೆ ಎಂದು ಹೇಳಿದ ಪ್ರಧಾನಿ ಮೋದಿ, ಭಯೋತ್ಪಾದನೆ ಮತ್ತು ಹಗೆತನದಿಂದ ಮುಕ್ತವಾದ ಅನುಕೂಲಕರ ವಾತಾವರಣವನ್ನು ಸೃಷ್ಟಿಸುವುದು ಅವರ ಜವಾಬ್ದಾರಿಯಾಗಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವ ಜವಾಬ್ದಾರಿ ಪಾಕಿಸ್ತಾನದ ಮೇಲಿದೆ ಎಂದಿದ್ದಾರೆ.
ಗಡಿಯಾಚೆಗಿನ ಭಯೋತ್ಪಾದನೆಗೆ ಪಾಕಿಸ್ತಾನದ ಬೆಂಬಲದ ಬಗ್ಗೆ ಭಾರತವು ತನ್ನ ಕಳವಳವನ್ನು ಪದೇ ಪದೇ ವ್ಯಕ್ತಪಡಿಸುತ್ತಿದೆ . ಅದೇ ವೇಳೆ ಭಯೋತ್ಪಾದನೆ ಮತ್ತು ಮಾತುಕತೆಗಳು ಒಟ್ಟಿಗೆ ಹೋಗಲು ಸಾಧ್ಯವಿಲ್ಲ ಎಂದು ಭಾರತ ಹೇಳಿದೆ. ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ಈ ತಿಂಗಳ ಆರಂಭದಲ್ಲಿ ಗೋವಾದಲ್ಲಿ ನಡೆದ ಎಸ್ಸಿಒ ವಿದೇಶಾಂಗ ಸಚಿವರ ಸಭೆಯಲ್ಲಿ ಭಾಗವಹಿ ಸಿದ್ದರು. ಆದರೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರೊಂದಿಗೆ ಯಾವುದೇ ದ್ವಿಪಕ್ಷೀಯ ಮಾತುಕತೆ ನಡೆದಿಲ್ಲ. ಜಪಾನ್ನಲ್ಲಿ G7 ಶೃಂಗಸಭೆಗೆ ಹೊರಡುವ ಮುನ್ನ ನಿಕ್ಕಿ ಏಷ್ಯಾಗೆ ನೀಡಿದ ಸಂದರ್ಶನದಲ್ಲಿ ಪ್ರಧಾನಿ ಈ ಮಾತುಗಳನ್ನು ಹೇಳಿದ್ದಾರೆ.
Migrane Problem: ಬೇಸಿಗೆಯಲ್ಲಿ ಮೈಗ್ರೇನ್ ಸಮಸ್ಯೆ ಕಾಡುತ್ತಿದೆಯಾ: ಇಲ್ಲಿದೆ ಸಿಂಪಲ್ ಟಿಪ್ಸ್
ಇತ್ತ ಉಕ್ರೇನ್ನ ಮೇಲಿನ ಆಕ್ರಮಣಕ್ಕಾಗಿ ದೀರ್ಘಕಾಲದ ಮಿಲಿಟರಿ ಪಾಲುದಾರ ರಷ್ಯಾವನ್ನು ಭಾರತ ಸ್ಪಷ್ಟವಾಗಿ ಖಂಡಿಸಿಲ್ಲ. ಮೋದಿ ಪದೇ ಪದೇ ಶಾಂತಿಗಾಗಿ ಕರೆ ನೀಡುತ್ತಿರುವಾಗ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರ ಮುಂದೆಯೇ ಇಂದಿನ ಯುಗ ಯುದ್ಧದ ಯುಗವಲ್ಲ ಎಂದು ಹೇಳಿದ್ದರೂ ಭಾರತವು ರಷ್ಯಾದೊಂದಿಗೆ ಚುರುಕಾದ ವ್ಯವಹಾರವನ್ನು ಮುಂದುವರೆಸಿದೆ. ಭಾರತವು ಮಧ್ಯವರ್ತಿ ಪಾತ್ರವನ್ನು ವಹಿಸಬಹುದೇ ಎಂಬ ಪ್ರಶ್ನೆಗೆ, ಉಕ್ರೇನ್ ಸಂಘರ್ಷದ ಬಗ್ಗೆ ತಮ್ಮ ದೇಶದ ನಿಲುವು ಸ್ಪಷ್ಟ ಮತ್ತು ಅಚಲವಾಗಿದೆ ಎಂದು ಮೋದಿ ಹೇಳಿದ್ದಾರೆ.