ಬೆಂಗಳೂರು: ಇಂದಿರಾ ಕ್ಯಾಂಟೀನ್ ಪುನಾರಂಭಿಸುವ ಸಂಬಂಧ ಬಿಬಿಎಂಪಿ ಅಧಿಕಾರಿಗಳ ಸಭೆಯನ್ನು ಸಿಎಂ ಸಿದ್ದರಾಮಯ್ಯ ಕರೆದಿದ್ದು ಸಭೆಯಲ್ಲಿ ಮತ್ತೆ ಇಂದಿರಾ ಕ್ಯಾಂಟೀನ್ ಪುನಾರಾಂಭಿಸಲು ತೀರ್ಮಾನ ಮಾಡಿದ್ದಾರೆ. ಬೆಂಗಳೂರಲ್ಲಿ ಒಟ್ಟು 250 ಇಂದಿರಾ ಕ್ಯಾಂಟೀನ್ ಪುನಾ ತೆರೆಯಲು ಒಪ್ಪಿಗೆ ಸೂಚಿಸಲಾಗಿದೆ.
ಬೆಂಗಳೂರಿನಲ್ಲಿ 185 ಇಂದಿರಾ ಕ್ಯಾಂಟೀನ್ ಗಳನ್ನು ಈ ಹಿಂದೆ ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಆರಂಭ ಮಾಡಲಾಗಿತ್ತು. ಜೊತೆಗೆ ಹತ್ತು ಮೊಬೈಲ್ ಕ್ಯಾಂಟೀನ್ ಗಳನ್ನು ಆರಂಭಿಸಲಾಗಿತ್ತು. ಆದರೆ ಇದೀಗ 172 ಕ್ಯಾಂಟೀನ್ ಗಳು ಕಾರ್ಯಾಚರಣೆ ಮಾಡುತ್ತಿವೆ.
ಇಂದಿರಾ ಕ್ಯಾಂಟೀನ್ ಊಟದ ಮೆನುವಿನಲ್ಲಿ ಕೆಲವೊಂದು ಬದಲಾವಣೆ ಮಾಡಲು ಸರ್ಕಾರ ಚಿಂತನೆ ನಡೆಸುತ್ತಿದೆ. ಊಟದ ಮೆನು, ದರ ಪರಿಷ್ಕರಣೆ ಸೇರಿದಂತೆ ಒಂದಿಷ್ಟು ಬದಲಾವಣೆಗಳೊಂದಿಗೆ ಇಂದಿರಾ ಕ್ಯಾಂಟೀನ್ ಪುನಾರಾಂಭ ಮಾಡುವುದು ಸರ್ಕಾರದ ಉದ್ದೇಶವಾಗಿದೆ