ಬೆಂಗಳೂರು: ಹಳೇ ಇಂದಿರಾ ಕ್ಯಾಂಟೀನ್ಗೆ ಹೊಸ ರೂಪ ಕೊಟ್ಟು ಮತ್ತೆ ಇಂದಿರಾ ಕ್ಯಾಂಟೀನ್ ಆರಂಭಿಸಲು ತೀರ್ಮಾನ ಮಾಡಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ನಗರದಲ್ಲಿ ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ 250 ಕ್ಯಾಂಟಿನ್ ಪ್ರಾರಂಭಕ್ಕೆ ಸೂಚನೆ ನೀಡಲಾಗಿದೆ. ಇಂದಿರಾ ಕ್ಯಾಂಟೀನ್ ಗಳಲ್ಲಿನ ಮೆನು ಬದಲಾವಣೆ ಮಾಡುವ ಮೂಲಕ ಹೊಸದಾಗಿ ಟೆಂಡರ್ ಕರೆಯಲು ಸರ್ಕಾರ ತೀರ್ಮಾನ ಮಾಡಿದೆ ಎಂದರು.
ಹಳೇ ದರದಲ್ಲೇ ಇಂದಿರಾ ಕ್ಯಾಂಟೀನ್ ಊಟ ಸಿಗಲಿದೆ. ಟೆಂಡರ್ ಪ್ರಕ್ರಿಯೆ ಆದ ಕೂಡಲೇ ರೀ ಲಾಂಚ್ ಮಾಡಲಾಗುವುದು ಎಂದು ಸಿಎಂ ಹೇಳಿದ್ದಾರೆ.