ಕನಿಷ್ಠ ಬೆಂಬಲ ಬೆಲೆ (ಎಂಎಸ್ ಪಿ) ಅಡಿಯಲ್ಲಿ ಕೃಷಿ ಉತ್ಪನ್ನಗಳ ಖರೀದಿಗೆ ಕೇಂದ್ರ ಸರ್ಕಾರ ನೀಡುವ ಅನುದಾನದಲ್ಲಿ ಕರ್ನಾಟಕಕ್ಕೆ ಅನ್ಯಾಯ ಆಗುತ್ತಿದ್ದು, ರಾಜ್ಯದವರೇ ಆದ ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸಚಿವ ಪ್ರಹ್ಲಾದ್ ಜೋಶಿ ಸರಿಪಡಿಸಲಿ ಎಂದು ರೈತ ನಾಯಕ ಕುರಬೂರು ಶಾಂತ ಕುಮಾರ್ ಒತ್ತಾಯಿಸಿದರು.
ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,
ಎಂಎಸ್ ಪಿ ಅಡಿ 24 ಕೃಷಿ ಉತ್ಪನ್ನಗಳನ್ನು ಖರೀದಿಸಲಾಗುತ್ತಿದೆ. ಕೇಂದ್ರ ಸರ್ಕಾರ ನೀಡುವ ಅನುದಾನದಲ್ಲಿ ಶೇ.45 ರಷ್ಟು ಅನುದಾನ ಪಂಜಾಬ್, ಹರ್ಯಾಣ ರಾಜ್ಯಗಳಿಗೆ ಹೋಗುತ್ತಿದೆ. ತೆಲಂಗಾಣಕ್ಕೂ ಹೆಚ್ಚಿನ ಹಣ ನೀಡುತ್ತಿದ್ದರೆ, ಕರ್ನಾಟಕಕ್ಕೆ ಕೇವಲ ಶೇ. 3 ರಷ್ಟು ಅನುದಾನ
ನಿಟ್ಟಿನಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ತಡೆಗೆ ರಾಜ್ಯದವರೇ ಆಗಿರುವ ಕೇಂದ್ರ ಸಚಿವ ಜೋಶಿ ಕ್ರಮ ಕೈಗೊಳ್ಳಲಿ. ಕಬ್ಬು ಬೆಳೆಗಾರರಿಗೆ ಸೂಕ್ತಬೆಲೆ ಸಿಗುತ್ತಿಲ್ಲ. ಅಂದಾಜು 700 ಕೋಟಿ ರೂ ಬಾಕಿ ಬರಬೇಕಿದೆ ಈ ಬಗ್ಗೆ ಗಂಭೀರವಾಗಿ ಪರಿಗಣಿಸಲಿ. ನಟ ದರ್ಶನ್ ಸೇರಿದಂತೆ ಉನ್ನತ ಹಾಗೂ ಜವಾಬ್ದಾರಿಯುತ ಸ್ಥಾನದಲ್ಲಿದ್ದವರು ಮಾದರಿ, ಜವಾಬ್ದಾರಿಯುತವಾಗಿ ವರ್ತಿಸಬೇಕು ಎಂದರು.