ಕೆ.ಆರ್.ಪುರ.: ರಾಜಕೀಯವಾಗಿ ಹಿಂದುಳಿದಿರುವ ಮಾದಿಗ ಸಮುದಾಯಕ್ಕೆ ಮಹದೇಪುರ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಮಾದಿಗ ಸಮುದಾಯದ ಮುಖಂಡರಿಗೆ ರಾಷ್ಟ್ರೀಯ ಪಕ್ಷಗಳು ಮತ್ತು ಪ್ರಾದೇಶಿಕ ಪಕ್ಷಗಳು ಟಿಕೆಟ್ ನೀಡಿ ಒಳ ಮೀಸಲಾತಿ ಅನುಗುಣವಾಗಿ ಗುರುತಿಸಬೇಕೆಂದು ಬೆಂಗಳೂರು ಪೂರ್ವ ತಾಲೂಕು ಆದಿಜಾಂಭವ ಜನ ಸಂಘ, ಕರ್ನಾಟಕ ದಲಿತ ಸಂಘರ್ಷ ಸಮಿತಿ ವತಿಯಿಂದ ಒತ್ತಾಯ ಮಾಡಿದರು.
ಕೆಆರ್ ಪುರದಲ್ಲಿರುವ ಬೆಂಗಳೂರು ಪೂರ್ವ ತಾಲೂಕು ಕಚೇರಿಯಲ್ಲಿ ನಡೆಸಲಾದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಪೂರ್ವ ತಾಲೂಕು ಅಧ್ಯಕ್ಷ ವಿ.ಕೃಷ್ಣಮೂರ್ತಿ, ಮಹದೇಪುರ ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಮಾದಿಗ ಸಮುದಾಯದ ಮುಖಂಡರಿಗೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದಲ್ಲಿ ಟಿಕೆಟ್ ನೀಡುವ ಮೂಲಕ ನಮ್ಮ ಸಮುದಾಯಕ್ಕೆ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು ಎಂದು ಮನವಿ ಮಾಡಿದರು.
2008 ರಲ್ಲಿ ವರ್ತೂರು ವಿಧಾನಸಭಾ ಕ್ಷೇತ್ರದಿಂದ ಪುನರ್ ವಿಂಗಡನೆ ನಂತರ ರಚನೆಯಾದ ಸತತವಾಗಿ ಮಹದೇವಪುರ ಮೀಸಲು ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳು ಅತಿ ಕಡಿಮೆ ಜನಸಂಖ್ಯೆ ಹೊಂದಿರುವ ಭೋವಿ ಜನಾಂಗ ದವರಿಗೆ ಸ್ಪರ್ಧಿಸಲು ಅವಕಾಶ ಮಾಡಿಕೊಡಲಾಗುತ್ತಿದೆ, ಕ್ಷೇತ್ರದಲ್ಲಿ 80 ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇರುವ ಮಾದಿಗ ಸಮುದಾಯಕ್ಕೆ ಅನ್ಯಾಯ ಮಾಡಲಾಗುತ್ತಿದೆ, ಆದರೆ ಬಹುಸಂಖ್ಯಾತ ಹೊಂದಿರುವ ನಮ್ಮ ಸಮುದಾಯಕ್ಕೆ ರಾಜಕೀಯ ಪ್ರಾತಿನಿಧ್ಯ ಯಾವುದೇ ರಾಜಕೀಯ ಪಕ್ಷಗಳು ನೀಡುತ್ತಿಲ್ಲ, 15 ವರ್ಷದಿಂದ ಯಾವೊಬ್ಬ ಮುಖಂಡರಿಗೂ ಟಿಕೆಟ್ ನೀಡಿದೆ ವಂಚಿಸಲಾಗುತ್ತಿದೆ, ಜನಸಂಖ್ಯೆ ಹೊಂದಿರುವ ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ದೊರಕಿಸಿಕೊಡಬೇಕು ಆದ್ದರಿಂದ ಪಕ್ಷಗಳ ಹೈಕಾಮಾಂಡ್ ಈ ಬಗ್ಗೆ ಗಂಭೀರವಾಗಿ ಪರಿಗಣಿಸಿ ನಮ್ಮ ಸಮುದಾಯದ ಮುಖಂಡರಿಗೆ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಮುಖಂಡರಾದ ವೆಂಕಟಸ್ವಾಮಿ, ರಮೇಶ್, ಮಾದೇಶ್, ಮಂಜುನಾಥ್, ಮುನೇಂದ್ರ ಮತ್ತಿತರರು ಇದ್ದರು