ಬೆಂಗಳೂರು:- ಕೃಷಿ ನೀರಾವರಿಗೆ ಸೌರವಿದ್ಯುತ್ ಚಾಲಿತ ಪಂಪ್ ಅಳವಡಿಕೆಗೆ ಟೆಂಡರ್ ಗಳನ್ನು ಗುರುತಿಸಲಾಗಿದೆ ಎಂದು ಕೆಜೆ ಜಾರ್ಜ್ ಹೇಳಿದ್ದಾರೆ.
ಬೆಂಗಳೂರು ಕೃಷಿ ವಿವಿ ಕ್ಯಾಂಪಸ್ ಜಿಕೆವಿಕೆಯಲ್ಲಿ ಇಂಧನ ಇಲಾಖೆ ಶನಿವಾರ ಆಯೋಜಿಸಿದ್ದ ‘ರೈತ ಸೌರಶಕ್ತಿ ಮೇಳ’ದ ಉದ್ಘಾಟನೆ, ‘ಕುಸುಮ್’ ಬಿ ಮತ್ತು ಸಿ ಯೋಜನೆ ಹಾಗೂ ಹೊಸ ವಿದ್ಯುತ್ ಉಪಕೇಂದ್ರಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದಲ್ಲಿ ಇಂಧನ ಸಚಿವ ಕೆಜೆ ಜಾರ್ಜ್ ಭಾಗಿಯಾಗಿದ್ದರು.
ಪ್ರಧಾನಮಂತ್ರಿ ಕುಸುಮ್ ಯೋಜನೆಯಡಿ ಕೃಷಿ ನೀರಾವರಿಗೆ ಸೌರವಿದ್ಯುತ್ ಚಾಲಿತ ಪಂಪ್ ಅಳವಡಿಕೆಗೆ ಟೆಂಡರ್ಗಳನ್ನು ಗುರುತಿಸಲಾಗಿದೆ. ಮೊಬೈಲ್ ಆ್ಯಪ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು ಎಂದರು.
ಇನ್ನೂ ಬಳಿಕ ಸಿದ್ದರಾಮಯ್ಯ ಮಾತನಾಡಿ, ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಯನ್ನು ಪೂರೈಸಲು ಉತ್ಪಾದನೆಯೂ ಹೆಚ್ಚಾಗಬೇಕು. ಮುಂದಿನ ಏಳು ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ವಿದ್ಯುತ್ (Electricity) ಉತ್ಪಾದನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಪ್ರಸ್ತುತ, 32,000 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಶೇ63 ರಷ್ಟು ವಿದ್ಯುತ್ ಅನ್ನು ನವೀಕರಿಸಬಹುದಾದ ಶಕ್ತಿಯ ಮೂಲಕ ಉತ್ಪಾದಿಸಲಾಗುತ್ತಿದೆ. ಮತ್ತು ಉಳಿದವು ಸಾಂಪ್ರದಾಯಿಕ ಮೂಲಗಳಿಂದ ಉತ್ಪಾದಿಸಲಾಗುತ್ತ