ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲಿನಲ್ಲಿದ್ದ ನಟ ದರ್ಶನ್ ಗೆ ಐದು ತಿಂಗಳ ಬಳಿಕ ವೈದ್ಯಕೀಯ ವರದಿ ಆಧರಿಸಿ ಷರತ್ತು ಬದ್ದ ಜಾಮೀನು ನೀಡಲಾಗಿದೆ. ಪವಿತ್ರಾ ಗೌಡಗಾಗಿ ದರ್ಶನ್ ಜೈಲು ಸೇರಿದ್ದರು ದರ್ಶನ್ ಪರವಾಗಿ ಅಂದಿನಿಂದಲೂ ನಿಂತಿದ್ದ ಪತ್ನಿ ವಿಜಯಲಕ್ಷ್ಮಿ. ದರ್ಶನ್ ಬಿಡುಗಡೆಗಾಗಿ ಅನೇಕ ದೇವಾಲಯಗಳಿಗೆ ಅವರು ಭೇಟಿ ಕೊಟ್ಟಿದ್ದರು. ಈಗ ದರ್ಶನ್ಗೆ ಮಧ್ಯಂತರ ಜಾಮೀನು ಸಿಕ್ಕಿದ್ದು ಕೊಂಚ ನಿರಾಳರಾಗಿದ್ದಾರೆ.
ದರ್ಶನ್ಗೆ ಆರು ವಾರಗಳ ಷರತ್ತುಬದ್ಧ ಜಾಮೀನು ಸಿಗುತ್ತಿದ್ದಂತೆ ಪತ್ನಿ ವಿಜಯಲಕ್ಷ್ಮೀ ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಒಂದನ್ನು ಮಾಡಿದ್ದಾರೆ. ಕಾಮಕ್ಯ ದೇವಸ್ಥಾನದ ಫೋಟೋ ಹಾಕಿ ಕೃತಜ್ಞತೆ ಸಲ್ಲಿಸಿದ್ದಾರೆ. ದೇವಿ ಆಶೀರ್ವಾದಿಂದ ಬೇಲ್ ಸಿಕ್ಕಿದೆ ಎಂದು ವಿಜಯಲಕ್ಷ್ಮೀ ದೇವರಿಗೆ ಧನ್ಯವಾದ ತಿಳಿಸಿದ್ದಾರೆ.
ದರ್ಶನ್ ಅವರು ಇಂದೇ ಬಿಡುಗಡೆ ಆಗೋ ಸಾಧ್ಯತೆ ಇದೆ. ಹಾಗದಲ್ಲಿ ದರ್ಶನ್ ಅವರನ್ನು ಹೊರಕ್ಕೆ ಬಂದ ಬಳಿಕ ಅವರನ್ನು ಕರೆದುಕೊಂಡು ಬರಲು ವಿಜಯಲಕ್ಷ್ಮಿ ತೆರಳುವ ಸಾಧ್ಯತೆ ಇರುತ್ತದೆ. ದರ್ಶನ್ ಅವರು ಮೊದಲು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ. ಇದಾದ ಬಳಿಕ ಅವರು ವೈದ್ಯಕೀಯ ಚಿಕಿತ್ಸೆ ಪಡೆಯಲಿದ್ದಾರೆ ಎನ್ನಲಾಗುತ್ತಿದೆ.
ಕಳೆದ ಕೆಲವು ವಾರಗಳಿಂದ ದರ್ಶನ್ ಅವರು ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದರು. ಅವರು ಸಂಪೂರ್ಣ ಚೇತರಿಕೆ ಕಾಣಲಿ ಎಂದು ಫ್ಯಾನ್ಸ್ ಬಯಸುತ್ತಿದ್ದರು. ಈಗ ವೈದ್ಯಕೀಯ ರಿಪೋರ್ಟ್ ಆಧಾರಿಸಿದ ಜಾಮೀನು ನೀಡಲಾಗಿದೆ. ಸದ್ಯ ಪಾಸ್ಪೋರ್ಟ್ನ ಕೋರ್ಟ್ಗೆ ಸಲ್ಲಿಕೆ ಮಾಡುವಂತೆ ನ್ಯಾಯಮೂರ್ತಿಗಳು ಸೂಚನೆ ನೀಡಿದ್ದಾರೆ.